ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

16ನೇ ಲೋಕಸಭಾ ಅಧಿವೇಶನ: 2ನೇ ದಿನದ ಕಲಾಪ ಆರಂಭ, ಸಂಸದರಾಗಿ ಮೋದಿ ಪ್ರಮಾಣ

16ನೇ ಲೋಕಸಭಾ ಅಧಿವೇಶನದ ಎರಡನೇ ದಿನದ ಕಲಾಪ ಗುರುವಾರ ಆರಂಭವಾಗಿದ್ದು, ಹಂಗಾಮಿ ಸ್ಪೀಕರ್ ಕಮಲ್...

Lingaraj Badiger
Updated On : 5 Jun 2014, 3:56 am

ನವದೆಹಲಿ: 16ನೇ ಲೋಕಸಭಾ ಅಧಿವೇಶನದ ಎರಡನೇ ದಿನದ ಕಲಾಪ ಗುರುವಾರ ಆರಂಭವಾಗಿದ್ದು, ಹಂಗಾಮಿ ಸ್ಪೀಕರ್ ಕಮಲ್ ನಾಥ್ ಅವರು ಇಂದು ನೂತನ ಸಂಸದರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಸಂಸದರಾಗಿ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಹಾಗೂ ಮೂರನೆಯರಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂಸದರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಕೇಂದ್ರ ರೇಲ್ವೆ ಸಚಿವ ಡಿ.ವಿ.ಸದಾನಂದಗೌಡ ಅವರು ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು. ಇನ್ನು ಸಚಿವ ಅನಂತ್ ಕುಮಾರ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

16ನೇ ಲೋಕಸಭೆಯ ಸ್ವೀಕರ್ ಆಗಿ ಸುಮಿತ್ರಾ ಮಹಾಜನ್ ಆಯ್ಕೆ ಅಂತಿಮ
ಆಡಳಿತರೂಢ ಬಿಜೆಪಿ ಮಧ್ಯಪ್ರದೇಶದ ಇಂದೋರ್ನಿಂದ ಸತತ ಎಂಟು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಸುಮಿತ್ರಾ ಮಹಾಜನ್ ಅವರನ್ನು 16ನೇ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡಿದೆ. ನಾಳೆ ಸ್ಪೀಕರ್ ಚುನಾವಣೆ ನಡೆಯಲಿದೆ. ಸುಮಿತ್ರಾ ಎರಡನೇ ಮಹಿಳಾ ಸ್ಪೀಕರ್ ಆಗಲಿದ್ದಾರೆ. ಹಿಂದಿನ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದ ಮೀರಾಕುಮಾರ್ ಮೊದಲ ಮಹಿಳೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಜೂನ್ 9ರಂದು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ಬುಧವಾರ ನಡೆದ ಸಚಿವ ಸಂಪುಟ ಸಭೆ ಅಂಗೀಕಾರದ ಮುದ್ರೆಯೊತ್ತಿದೆ. ಸರ್ಕಾರದ ಕಾರ್ಯಸೂಚಿಯನ್ನು ಭಾಷಣ ಬಿಂಬಿಸಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement