ಒಬಾಮಾ ಆಹ್ವಾನ ಒಪ್ಪಿದ ಮೋದಿ, ಸೆಪ್ಟೆಂಬರ್ನಲ್ಲಿ ಅಮೆರಿಕ ಭೇಟಿ
ನವದೆಹಲಿ: ಅಮೆರಿಕಕ್ಕೆ ಭೇಟಿ ನೀಡುವಂತೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ನೀಡಿದ್ದ ಆಹ್ವಾನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವೀಕರಿಸಿದ್ದು, ಸೆಪ್ಟೆಂಬರ್ನಲ್ಲಿ ಅಮೆರಿಕಕ್ಕೆ ಭೇಟಿ ನೀಡುವುದಾಗಿ ಗುರುವಾರ ತಿಳಿಸಿದ್ದಾರೆ.
ಈ ಮುಂಚೆ ಮೋದಿ ಅವರಿಗೆ ವೀಸಾ ನೀಡಲು ನಿರಾಕರಿಸಿದ್ದ ಅಮೆರಿಕ, ಅವರು ಪ್ರಧಾನಿಯಾಗುತ್ತಿದ್ದಂತೆ ತನ್ನ ವರಸೆ ಬದಲಿಸಿ, ಭಾರತದ ನೂತನ ಪ್ರಧಾನಿಗೆ ಆಹ್ವಾನ ನೀಡಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮೋದಿ, ಅಮೆರಿಕಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.
ಸೆಪ್ಟೆಂಬರ್ 26ರಂದು ಅಮೆರಿಕದಲ್ಲಿ ನಡೆಯುವ ವಿಶ್ವಸಂಸ್ಥೆಯ ಮಹಾ ಸಭೆಯನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ಬಳಿಕ ಒಬಾಮಾ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ.