ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಹವಾಲು ಬಂದ 3-7 ದಿನದಲ್ಲಿ ಕ್ರಮ: ಮೋದಿ ಗಡವು

ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಆಡಳಿತ...

Vishwanath S
Updated On : 6 Jun 2014, 7:05 am

ನವದೆಹಲಿ: ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಆಡಳಿತ ಯಂತ್ರ ಚುರುಕುಗೊಳಿಸಲು ಕ್ರಮ ಕೈಗೊಂಡಿದ್ದು, ಅಹವಾಲು ಬಂದ 3-7 ದಿನಗಳೊಳಗೆ ಕ್ರಮಕೈಗೊಳ್ಳುವಂತೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವ ಉದ್ದೇಶದಿಂದಾಗಿ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದ್ದು, ಕಚೇರಿಗೆ ಅಹವಾಲು ಬಂದ 3-7 ದಿನಗಳೊಳಗೆ ವಿಲೇವಾರಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕುರಿತು ಸಚಿವಾಲಯಗಳಿಗೆ ಪ್ರಧಾನಿ ಸೂಚನೆ ನೀಡಿದ್ದು, ಈ ಮೂಲಕ ಆಡಳಿತದಲ್ಲಿ ಗಣನೀಯ ಬದಲಾವಣೆ ತರಲು ಮುಂದಾಗಿದ್ದಾರೆ.

ಇದಕ್ಕೂ ಮುನ್ನ, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಹಾಗೂ ಉತ್ತಮ ಯೋಜನೆಗಳ ಅನುಷ್ಠಾನಕ್ಕೆ ಪ್ರೋತ್ಸಾಹ ನೀಡುವುದಾಗಿ ಹಿರಿಯ ಅಧಿಕಾರಿಗಳಿಗೆ ಮೋದಿ ಅಭಯ ಹಸ್ತ ನೀಡಿದ್ದರು. ಅಲ್ಲದೆ ಪ್ರಧಾನಿ ಮೋದಿ ಅಧಿಕಾರದ ಗದ್ದುಗೆಗೆ ಏರಿದ ಸ್ವಲ್ಪ ದಿನಗಳಲ್ಲಿ ಸಚಿವರಿಗೆ ಮತ್ತು ಸಂಸದರಿಗೆ ತಮ್ಮ ಸಂಬಂಧಿಗಳನ್ನು ಮತ್ತು ಆಪ್ತರನ್ನು ನೇಮಕ ಮಾಡದಂತೆ ಸೂಚನೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement