ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾವೇರಿ ನೀರು ಹಂಚಿಕೆ: ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ: ಯಡಿಯೂರಪ್ಪ

Vishwanath S
Updated On : 6 Jun 2014, 3:40 am

ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸಿದ್ಥತೆ ವಿಚಾರಕ್ಕೆ ಸಂಬಂಧಿಸದಂತೆ ಪ್ರತಿಕ್ರಿಯಿಸಿರುವ ಸಂಸದ ಬಿ.ಎಸ್. ಯಡಿಯೂರಪ್ಪ ಅವರು, ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಲು ಬಿಡುವುದಿಲ್ಲ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುತ್ತೇನೆ. ಸದ್ಯ ಹೀಗ ಯಾವ ರೀತಿ ಎರಡು ರಾಜ್ಯಗಳಿಗೆ ನೀರು ಹಂಚಿಕೆಯಾಗುತ್ತಿದ್ದೇಯೋ ಅದೇ ವ್ಯವಸ್ಥೆ ಮುಂದುವರಿಯಲಿದೆ ಎಂದರು.

ಇದೇ ವಿಚಾರವಾಗಿ ಮಾತನಾಡಿರುವ ಸಂಸದೆ ಶೋಭಾ ಕರಂದ್ಲಾಜೆ, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸಚಿವ ಸಂಪುಟದ ಟಿಪ್ಪಣಿ ಸಿದ್ಧವಾಗಿದೆ ಎಂಬುದು ಕೇವಲ ವಂದತಿ. ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಬಗ್ಗೆ ಯಾವುದೇ ಟಿಪ್ಪಣಿ ಸಿದ್ಧವಾಗಿಲ್ಲ ಎಂದರು.

ಕಾವೇರಿ ಹಿತಾಸಕ್ತಿಗಾಗಿ ಪಕ್ಷದ ಬೇಧ ಮರೆತು ಹೋರಾಡುತ್ತೇವೆ ಇಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ನರೇಂದ್ರ ಮೋದಿ ಸರ್ಕಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಗುವ ಭರವಸೆ ಇದ್ದು, ರಾಜ್ಯಕ್ಕೆ ಅನ್ಯಾಯಾವಾಗಲು ಎಂದಿಗೂ ಬಿಡುವುದಿಲ್ಲ ಎಂದು ಶೋಭಾ ಹೇಳಿದ್ದಾರೆ.

ಕಾವೇರಿ ಐತೀರ್ಪಿನ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿದ್ದು, ಅದರ ತೀರ್ಪು ಹೊರಬರುವವರೆಗೂ ನಿರ್ವಹಣಾ ಮಂಡಳಿ ರಚನೆ ಬೇಡ ಎಂದು ಸಿದ್ದರಾಮಯ್ಯ ಅವರು ನಿನ್ನೆ ಪ್ರಧಾನಿಗಳಿಗೆ ಮನವಿ ಮಾಡಿದ್ದರು. ಆದರೆ ಕೇಂದ್ರ ಸರ್ಕಾರ ಈ ಕೋರಿಕೆಗೆ ಮನ್ನಣೆ ನೀಡಿದಂತಿಲ್ಲ.

ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಕಾವೇರಿ ಜಲ ನಿರ್ವಹಣಾ ಮಂಡಳಿ ರಚಿಸುವ ಬಗ್ಗೆ ಟಿಪ್ಪಣಿ ಸಿದ್ಧಪಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement