ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಷರೀಫ್‌ಗೆ ಖುಷಿ ಕೊಡದ ಭಾರತ ಭೇಟಿ: ಪಾಕ್ ಮಾಧ್ಯಮ

ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ...

Lingaraj Badiger
Updated On : 6 Jun 2014, 5:16 am

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರಿಗೆ ಭಾರತ ಭೇಟಿ 'ಅಷ್ಟು ಖುಷಿ ಕೊಟ್ಟಿಲ್ಲ' ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ನವಾಜ್ ಷರೀಫ್ ಅವರು ಭಾರತದ ನೂತನ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತೆರಳಿದ್ದು ಸಮಾಧಾನಕರವಾಗಿಲ್ಲ ಎಂದು ಹೆಸರು ಹೇಳಲು ಇಚ್ಚಿಸಿದ ಪಿಎಂಎಲ್(ಎನ್) ನಾಯಕರೊಬ್ಬರು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ದೆಹಲಿಯಲ್ಲಿ ಇಬ್ಬರು ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡದಿರುವುದು ಷರೀಫ್ ಅವರ ಅಸಮಾಧಾನಕ್ಕೆ ಕಾರಣ ಎಂದು ಪಿಎಂಎಲ್(ಎನ್) ಹಿರಿಯ ನಾಯಕರೊಬ್ಬರು ಡಾನ್ ನ್ಯೂಸ್‌ಗೆ ಹೇಳಿದ್ದಾರೆ.

ಕಳೆದ ತಿಂಗಳು ದೆಹಲಿಗೆ ಆಗಮಿಸಿದ್ದ ಷರೀಫ್ ನೇತೃತ್ವದ ನಿಯೋಗ ಮೋದಿಯೊಂದಿಗೆ ಮಾತುಕತೆ ನಡೆಸಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಲು ಬಯಸಿತ್ತು. ಆದರೆ ಇದಕ್ಕೆ ಭಾರತದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬರಲಿಲ್ಲ ಎಂದು ವರದಿ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement