ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಪೀಕರ್ ಆಗಿ ಸುಮಿತ್ರಾ ಮಹಾಜನ್ ಅವಿರೋಧ ಆಯ್ಕೆ

16ನೇ ಲೋಕಸಭೆಯ ಸ್ಪೀಕರ್ ಆಗಿ ಬಿಜೆಪಿಯ ಸುಮಿತ್ರಾ ಮಹಾಜನ್ ಅವರು ಶುಕ್ರವಾರ ಅವಿರೋಧ...

Lingaraj Badiger
Updated On : 6 Jun 2014, 5:42 am

ನವದೆಹಲಿ: 16ನೇ ಲೋಕಸಭೆಯ ಸ್ಪೀಕರ್ ಆಗಿ ಬಿಜೆಪಿಯ ಸುಮಿತ್ರಾ ಮಹಾಜನ್ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯ ಸುಮಿತ್ರಾ ಮಹಾಜನ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವರ ಆಯ್ಕೆಯನ್ನು ಇಂದು ಅಧಿಕೃತವಾಗಿ ಘೋಷಿಸಲಾಗಿದೆ.

ಸುಮಿತ್ರಾ ಮಹಾಜನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಸಂಸದರಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ 8 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಸುಮಿತ್ರಾ ಮಹಾಜನ್ ಅವರ ಅನುಭವ ಸಂಸತ್ತಿನಲ್ಲಿ ಅನುಕೂಲವಾಗಲಿದೆ ಎಂದು ಹೇಳಿದರು.

ಸುಮಿತ್ರಾ ಮಹಾಜನ್ ಅವರು ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಿಂದ 1989ರಿಂದ ಸತತ ಎಂಟು ಬಾರಿ ಸಂಸತ್‌ಗೆ ಆಯ್ಕೆಯಾಗಿದ್ದಾರೆ.

ನೂತನ ಸ್ಪೀಕರ್‌ಗೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಸಚಿವ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ನಾಯಕರು ಅಭಿನಂದನೆ ಸಲ್ಲಿಸಿದರು.

ಎಡಿಎಂಕೆಗೆ ಡೆಪ್ಯುಟಿ ಸ್ಪೀಕರ್ ಹುದ್ದೆ?: ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ಲೋಕಸಭೆಯಲ್ಲಿ ಎಐಎಡಿಎಂಕೆ ನಾಯಕ ಎಂ.ತಂಬಿದೊರೈ ಹೆಸರು ಕೇಳಿಬರುತ್ತಿದೆ. ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಕಳೆದ ವಾರ ಮೋದಿಯವರನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ ಈ ವಿಚಾರ ಚರ್ಚೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement