ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಕ್ಸಲ್ ಪೀಡಿತ ಪ್ರದೇಶಗಳಿಗೆ ಅಧಿಕ ಭತ್ಯೆ

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ...

Vishwanath S
Updated On : 7 Jun 2014, 4:18 am

ನವದೆಹಲಿ: ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಮತ್ತು ಭದ್ರತಾ ಸಿಬ್ಬಂದಿಗೆ ವಿಶೇಷ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ನಕ್ಸಲ್ ವಿರೋಧಿ ಚಟುವಟಿಕೆಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಹೊಸ ಕಾರ್ಯ ಯೋಜನೆಯನ್ನು ರೂಪಿಸಿದ್ದು, ಅದರಂತೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಮತ್ತು ಭದ್ರತಾ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡುವುದರ ಮೂಲಕ ಅಪಾಯಕಾರಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಹಿಂದೇಟು ಹಾಕುವ ಅಧಿಕಾರಿಗಳನ್ನು ಸೆಳೆಯಲು ಮುಂದಾಗಿದೆ.

ಇದರಿಂದಾಗಿ ದೇಶದ ಅತ್ಯಂತ ಅಪಾಯಕಾರಿ ವಲಯ ವಾದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕೆಲಸ ಮಾಡುವ ಅರೆಮಿಲಿಟರಿ ಪಡೆಗಳಿಗೆ ಅವರು ಜಮ್ಮು ಕಾಶ್ಮೀರ ಮತ್ತು ಈಶ್ಯಾನ ಪ್ರದೇಶದಲ್ಲಿ ಕೆಲಸ ಮಾಡುವುದಕ್ಕಿಂತಲೂ ಹೆಚ್ಚು ಭತ್ಯೆ ಸಿಗಲಿದೆ.

ಜಮ್ಮು ಕಾಶ್ಮೀರದಲ್ಲಿ ಕೆಲಸ ಮಾಡುವ ಅರೆಸೇನಾ ಪಡೆಗಳಿಗೆ ತನ್ನ ಸಾಮಾನ್ಯ ಸಂಬಳ ಮತ್ತು ಇತರ ಭತ್ಯೆಗಳ ಜತೆಗೆ ತಿಂಗಳಿಗೆ 8 ಸಾವಿರ ರುಪಾಯಿ ಅಧಿಕ ಹಣ ಸಿಗುತ್ತದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕೆಲಸ ಮಾಡಲು ಪ್ರತಿಭಾವಂತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಆಕರ್ಷಿಸುವ ಸಲುವಾಗಿ ಅವರಿಗೆ ವಿಶೇಷ ಭತ್ಯೆ ನೀಡುವ ಬಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಅಲ್ಲದೆ ನಕ್ಸಲ್ ವ್ಯವಸ್ಥಾಪನೆ ವಿಭಾಗವನ್ನು ಎಡಪಂಥೀಯ ಭಯೋತ್ಪಾದನೆ ವಿಭಾಗ ಎಂದು ಹೆಸರು ಬದಲಿಸಲು ಹೊಸ ಸರ್ಕಾರ ಚಿಂತನೆ ನಡೆಸಿದ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement