ಮೇಲ್ಮನೆ ಚುನಾವಣೆ: ಈಶ್ವರಪ್ಪ, ಕೋರೆ ನಾಮಪತ್ರ ಸಲ್ಲಿಕೆ
ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಕೆ.ಎಸ್.ಈಶ್ವರಪ್ಪ ಹಾಗೂ ಪ್ರಭಾಕರ್ ಕೋರೆ ಅವರು ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಕೆ.ಎಸ್.ಈಶ್ವರಪ್ಪ ಹಾಗೂ ಪ್ರಭಾಕರ್ ಕೋರೆ ಅವರು ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.
ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ವಿಧಾಸಭೆ ಕಾರ್ಯದರ್ಶಿ ಓಂಪ್ರಕಾಶ್ ಅವರಿಗೆ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ಈಶ್ವರಪ್ಪಗೆ ಸಾಥ್ ನೀಡಿದರು.
ಇನ್ನು ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಅವರು ವಿಧಾನಸಭೆಯಿಂದ ರಾಜ್ಯಸಭೆಗೆ ಮರು ಆಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಿದರು.