ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿ ವಾಷಿಂಗ್ಟನ್ ಭೇಟಿ ದಿನಾಂಕ ಇನ್ನೂ ನಿಗದಿಯಾಗಿಲ್ಲ: ಅಮೆರಿಕ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಾಷಿಂಗ್ಟನ್‌ಗೆ ಭೇಟಿ ನೀಡುವ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು...

Lingaraj Badiger
Updated On : 7 Jun 2014, 12:42 pm

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಾಷಿಂಗ್ಟನ್‌ಗೆ ಭೇಟಿ ನೀಡುವ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಶನಿವಾರ ಅಮೆರಿಕ ಹೇಳಿದೆ.

ಮೋದಿ ಅಮೆರಿಕ ಪ್ರವಾಸದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ ಸರ್ಕಾರದ ಉಪ ವಕ್ತಾರ, ಮಾರೀ ಹರ್ಫ್, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡುವ ದಿನಾಂಕ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಕಾರ್ಯದರ್ಶಿ ಜಾನ್ ಕೆರ್ರಿ ಇಬ್ಬರೂ ಭಾರತದ ನೂತನ ಪ್ರಧಾನಿಯ ಸ್ವಾಗತಕ್ಕೆ ಉತ್ಸುಕರಾಗಿರುವುದಾಗಿ ಹೇಳಿದ್ದಾರೆ. ಆದರೆ ಆ ಬಗ್ಗೆ ಇನ್ನೂ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಸೆಪ್ಟೆಂಬರ್ 26 ಅಥವಾ 30 ಎಂದು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹರ್ಫ್ ತಿಳಿಸಿದ್ದಾರೆ.

ಮೇ 16ರಂದು ಫಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ದೂರವಾಣಿ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಿದ್ದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಅದನ್ನು ಮೋದಿ ಸ್ವೀಕರಿಸಿದ್ದಾರೆ.

ಉಭಯ ನಾಯಕರ ಭೇಟಿ ಬಗ್ಗೆ ಅಮೆರಿಕ ಆಡಳಿತದ ಜತೆ ಚರ್ಚೆ ನಡೆಸುವಂತೆ ವಾಷಿಂಗ್ಟನ್ನಲ್ಲಿರುವ ರಾಯಭಾರಿ ಎಸ್.ಜೈಶಂಕರ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ವಾಷಿಂಗ್ಟನ್ನಲ್ಲಿ ಅಮೆರಿಕ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಜೈಶಂಕರ್ ಪ್ರಧಾನಿ ಜತೆ ಚರ್ಚಿಸಲಿದ್ದಾರೆ.   2002ರ ಗುಜರಾತ್ ಗಲಭೆ ಹಿನ್ನೆಲೆಯಲ್ಲಿ ಹಿಂದಿನ ಅಮೆರಿಕ ಸರ್ಕಾರ 2005ರಲ್ಲಿ ಮೋದಿಗೆ ನಿಷೇಧ ಹೇರಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement