ವಿದೇಶಿ ಯುವತಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ...
ಜೈಪುರ: ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಜೈಪುರದಲ್ಲಿ ನಡೆದಿದೆ.
ಮಲೇಷ್ಯಾ ಮೂಲದ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಭಿಲ್ವಾರ್ ಮೂಲದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಅಮನ್ದೀಪ್ ಸಿಂಗ್ ಹೇಳಿದ್ದಾರೆ.
ಪ್ರವಾಸಕ್ಕೆಂದು ಬಂದಿದ್ದ ಯುವತಿ ಮೇಲೆ ಅವರ ಗೈಡ್ ಆಗಿದ್ದವನೇ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ 3 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಪಂಚತಾರ ಹೋಟೆಲ್ನಲ್ಲಿ ಊಟ ಮಾಡಿದ ನಂತರ ಆರೋಪಿ ಮಹಿಳೆಗೆ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ಕುಡಿಸಿ ನಂತರ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.