ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

15 ದಿನಗಳಲ್ಲಿ ವಿದ್ಯುತ್ ಸಮಸ್ಯೆಗೆ ಸೂಕ್ತ ಕ್ರಮ: ಪಿಯೂಶ್ ಗೋಯಲ್

ವಿದ್ಯುತ್ ಸಮಸ್ಯೆಗೆ ಮುಂದಿನ 15 ದಿನಗಳೊಳಗೆ ಸೂಕ್ತ ಕ್ರಮ..

Vishwanath S
Updated On : 10 Jun 2014, 3:55 am

ನವದೆಹಲಿ: ರಾಷ್ಟ್ರದ ರಾಜಧಾನಿಯಲ್ಲಿ ಉದ್ಭವಿಸಿರುವ ವಿದ್ಯುತ್ ಸಮಸ್ಯೆಗೆ ಮುಂದಿನ 15 ದಿನಗಳೊಳಗೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಕೇಂದ್ರ ಇಂಧನ ಸಚಿವ ಪಿಯೂಶ್ ಗೋಯಲ್ ಮಂಗಳವಾರ ತಿಳಿಸಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಯೂಶ್ ಗೋಯಲ್, ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲು ಕಾಂಗ್ರೆಸ್ ಸರ್ಕಾರವೇ ಕಾರಣ. ಹಿಂದಿನ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದಾಗಿ ಇಂದು ವಿದ್ಯುತ್ ಸಮಸ್ಯೆ ಬಿಗಡಾಯಿಸಿದೆ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಕಳೆದ 12 ವರ್ಷಗಳಿಂದ ನಿರಂತರವಾಗಿ ವಿದ್ಯುತ್ ಸಮಸ್ಯೆ ಎದುರಾಗುತ್ತಿದ್ದರು ಇದಕ್ಕೆ ಸೂಕ್ತ ಕ್ರಮಕೈಗೊಳ್ಳಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.

ಸದ್ಯ, ದೆಹಲಿಯಲ್ಲಿನ ವಿದ್ಯುತ್ ಸಮಸ್ಯೆಯನ್ನು ಮುಂದಿನ 15 ದಿನಗಳೊಳಗಾಗಿ ಬಗೆಹರಿಸುವತ್ತಾ ಕ್ರಮ ಕೈಗೊಳ್ಳುತ್ತೇವೆ. ವಿದ್ಯುತ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement