ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪರಿಷತ್ ಚುನಾವಣೆ: 7 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

ವಿಧಾನಪರಿಷತ್ ಚುನಾವಣೆ 7 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಅಂಗೀಕಾರವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ ಎಂದು ವಿಧಾನಸಭೆ...

Vishwanath S
Updated On : 10 Jun 2014, 1:43 am

ಬೆಂಗಳೂರು: ವಿಧಾನಪರಿಷತ್ ಚುನಾವಣೆ 7 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಅಂಗೀಕಾರವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ ಎಂದು ವಿಧಾನಸಭೆ ಕಾರ್ಯದರ್ಶಿ ಓಂಪ್ರಕಾಶ್ ಅವರು ಮಂಗಳವಾರ ತಿಳಿಸಿದ್ದಾರೆ.

ನಾಮಪತ್ರ ಪರಿಶೀಲನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಓಂಪ್ರಕಾಶ್, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಅಂಗೀಕಾರವಾಗಿದೆ. ವಿಧಾನಪರಿಷತ್ ಚುನಾವಣಗೆ 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಕಾಂಗ್ರೆಸ್‌ನಿಂದ 4, ಬಿಜೆಪಿಯಿಂದ 1, ಜೆಡಿಎಸ್‌ನಿಂದ 1, ಹಾಗೂ ಜೆಡಿಎಸ್, ಬಿಜೆಪಿ ಬೆಂಬಲಿತ 1 ನಾಮಪತ್ರ ಅಂಗೀಕಾರವಾಗಿದೆ ಎಂದರು.

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ 2, ಬಿಜೆಪಿಯಿಂದ 1, ಕಾಂಗ್ರೆಸ್ ಜೆಡಿಎಸ್ ಬೆಂಬಲಿತ 1 ನಾಮಪತ್ರ ಅಂಗೀಕಾರವಾಗಿದೆ. ಇದೇ ವೇಳೆ, ರಾಜಸಭೆಗೆ ಸಲ್ಲಿಸಿದ್ದ 2 ನಾಮಪತ್ರಗಳು ತಿರಸ್ಕೃತಗೊಂಡಿದ್ದು, ಅನುಮೋದಕರ ಸಹಿ ಇಲ್ಲದ ಕಾರಣ ಪದ್ಮರಾಜನ್, ಕೆ. ಮೋಹನ್ ನಾಮಪತ್ರ ತಿರಸ್ಕೃರಿಸಲಾಗಿದೆ ಎಂದು ಓಂಪ್ರಕಾಶ್ ತಿಳಿಸಿದ್ದಾರೆ.

ವಿಧಾನಪರಿಷತ್‌ಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಜಯಮ್ಮ, ಎನ್. ಎಸ್. ಬೋಸೆರಾಜು ಹಾಗೂ ಎಚ್.ಎಂ. ರೇವಣ್ಣ, ಬಿಜೆಪಿಯಿಂದ ಕೆ. ಎಸ್. ಈಶ್ವರಪ್ಪ, ಜೆಡಿಎಸ್ ಅಭ್ಯರ್ಥಿ ಡಾ.ಟಿ.ಎ. ಶರವಣ ಹಾಗೂ ಬಿಜೆಪಿ-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಡಿ.ಯು ಮಲ್ಲಿಕಾರ್ಜುನ ಅವರ ನಾಮಪತ್ರಗಳು ಅಂಗೀಕಾರವಾಗಿದ್ದು, ಇವರೆಲ್ಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೂ.12ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದ್ದು, 12ರ ಸಂಜೆ ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಓಂಪ್ರಕಾಸ್ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement