ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಿದ್ಯುತ್ ಪೂರೈಕೆ ಮಾಡುವುದಿಲ್ಲ: ವಿರಭದ್ರ ಸಿಂಗ್

ನಾವು ಇನ್ನು ಮುಂದೆ ಯಾವುದೇ ರಾಜ್ಯಗಳಿಗೂ ವಿದ್ಯುತ್ ಪೂರೈಕೆ ಮಾಡುವುದಿಲ್ಲ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರಸಿಂಗ್ ಅವರು ಹೇಳಿದ್ದಾರೆ.

Srinivasa Murthy VN
Updated On : 10 Jun 2014, 7:38 am

ಡೆಹ್ರಾಡೂನ್: ನಾವು ಇನ್ನು ಮುಂದೆ ಯಾವುದೇ ರಾಜ್ಯಗಳಿಗೂ ವಿದ್ಯುತ್ ಪೂರೈಕೆ ಮಾಡುವುದಿಲ್ಲ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರಸಿಂಗ್ ಅವರು ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ವೀರಭದ್ರ ಸಿಂಗ್ ಅವರು, ಈ ವರೆಗೂ ನಾವು ಸುಮಾರು 7 ರಾಜ್ಯಗಳಿಗೆ ವಿದ್ಯುತ್ ಪೂರೈಕೆ ಮಾಡುತ್ತಿದ್ದೆವು. ಆದರೆ ವಿದ್ಯುತ್ ಹಣ ನೀಡುವಲ್ಲಿ ಆ ರಾಜ್ಯಗಳ ಸರ್ಕಾರ ವಿಳಂಭ ಧೋರಣೆ ಅನುಸರಿಸುತ್ತಿವೆ. ಇದರಿಂದ ರಾಜ್ಯದ ಬೋಕ್ಕಸಕ್ಕೆ ನಷ್ಟವಾಗುತ್ತಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ರಾಜ್ಯಗಳಿಗೂ ನಾವು ವಿದ್ಯುತ್ ಪೂರೈಕೆ ಮಾಡುವುದಿಲ್ಲ ಎಂದು ವೀರಭದ್ರ ಸಿಂಗ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಹಿಮಾಚಲ ಪ್ರದೇಶ ರಾಜ್ಯವು ಹಿಮನದಿಗಳ ಬೀಡಾಗಿದ್ದು, ಇಲ್ಲಿ ವರ್ಷಂ ಪ್ರತೀ ನದಿಗಳು ಬತ್ತದೇ ಹರಿಯುತ್ತಲೇ ಇರುತ್ತವೆ. ಹೀಗಾಗಿ ಇಲ್ಲಿ ಸಾಕಷ್ಟು ಜಲವಿದ್ಯುತ್ ಸ್ಥಾವರಗಳಿದ್ದು, ಬೃಹತ್ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ರಾಜ್ಯಾದ್ಯಂತ ಸುಮಾರು 21 ಸಾವಿರದ 244 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಈ ಪೈಕಿ ಹೆಚ್ಚುವರಿ ವಿದ್ಯುತ್ ಅನ್ನು ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಈ ರಾಜ್ಯಗಳು ತಾವು ಪಡೆದ ವಿದ್ಯುತ್‌ಗೆ ಪ್ರತಿಯಾಗಿ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಹಣ ಪಾವತಿ ಮಾಡುತ್ತವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement