'ಪವಾರ್'ನ್ನು ಉಗ್ರ ಹಫೀಜ್ ಗೆ ಹೋಲಿಸಿದ ಉದ್ಧವ್ ಠಾಕ್ರೆ
ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯದ್ ಮಾದರಿಯಲ್ಲಿ ಎನ್ ಸಿಪಿ...
ಮುಂಬೈ: ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯದ್ ಮಾದರಿಯಲ್ಲಿ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ಹೇಳಿಕೆ ನೀಡುತ್ತಿದ್ದಾರೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಹೇಳಿದ್ದಾರೆ.
ಪುಣೆಯಲ್ಲಿ ಸಾಫ್ಟವೇರ್ ಇಂಜಿಯರ್ ಹತ್ಯೆ ಪ್ರಕರಣ ಸಂಬಂಧ ಪವಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿರುವ ಉದ್ಧವ್ ಠಾಕ್ರೆ, ಜಮಾತ್-ಉದ್-ದಾವಾದ ಸಂಸ್ಥಾಪಕ ಉಗ್ರ ಹಫೀಜ್ ಸಯ್ಯದ್ ಮಾದರಿಯಲ್ಲಿ ಪವಾರ್ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಹಿನ್ನಲೆಯಲ್ಲಿ ಪವಾರ್ ಅವರು ತಮ್ಮ ಮಾತಿನ ಹಿಡಿತ ಕಳೆದುಕೊಂಡಿದ್ದಾರೆ. ಅವರಿಗೆ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಬರದೇ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಠಾಕ್ರೆ ವ್ಯಂಗ್ಯವಾಡಿದ್ದಾರೆ.
ಸಾಫ್ಟವೇರ್ ಇಂಜಿಯರ್ ಹತ್ಯೆ ಪ್ರಕರಣ ಸಂಬಂಧ ಪವಾರ್ ಅವರು ಕೇಂದ್ರ ಸರ್ಕಾರ ವಿರುದ್ಧ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರ ಬದಲಾದಾಗಿನಿಂದ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಹೇಳಿದ್ದರು.