ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹೈಕೋರ್ಟ್ ಮೆಟ್ಟಿಲೇರಿದ 'ಅಭಿನೇತ್ರಿ'

ಮಳೆ ಹುಡುಗಿ ಪೂಜಾ ಗಾಂಧಿ ನಟಿಸಿ, ನಿರ್ಮಿಸುತ್ತಿರುವ 'ಅಭಿನೇತ್ರಿ'...

Lingaraj Badiger
Updated On : 11 Jun 2014, 5:11 am

ಬೆಂಗಳೂರು: ಮಳೆ ಹುಡುಗಿ ಪೂಜಾ ಗಾಂಧಿ ನಟಿಸಿ, ನಿರ್ಮಿಸುತ್ತಿರುವ ಬಹು ನಿರೀಕ್ಷಿತ 'ಅಭಿನೇತ್ರಿ' ಚಿತ್ರ ಬುಧವಾರ ಹೈಕೋರ್ಟ್ ಮೆಟ್ಟಿಲೇರಿದೆ.

ಚಿತ್ರ ಬಿಡುಗಡೆಗೆ ತಡೆ ನೀಡಿದ್ದ ಸಿಟಿ ಸಿವಿಲ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಪೂಜಾ ಗಾಂಧಿ ಅವರು ಇಂದು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಲೇಖಕಿ ಭಾಗ್ಯ ಕೃಷ್ಣಮೂರ್ತಿ ಎಂಬುವವರು ದಾಖಲಿಸಿದ್ದ ದೂರಿನ ಅನ್ವಯ ಅಭಿನೇತ್ರಿ ಚಿತ್ರಕ್ಕೆ ನಿನ್ನೆ ನ್ಯಾಯಾಲಯ ಮಧ್ಯಂತರ ತಡೆ ನೀಡಿತ್ತು. ಅಭಿನೇತ್ರಿ ಚಿತ್ರದ ಕಥೆ ತಮ್ಮದಾಗಿದ್ದು, ತಮ್ಮ ಅನುಮತಿ ಪಡೆಯದೇ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ಚಿತ್ರಕ್ಕೆ ತಡೆ ನೀಡಬೇಕು ಎಂದು  ಭಾಗ್ಯ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ 10ನೇ ಸಿಟಿ ಸಿವಿಲ್‌ಕೋರ್ಟ್ ಚಿತ್ರ ಬಿಡುಗಡೆಗೆ ಮಧ್ಯಂತರ ತಡೆ ನೀಡಿದೆ. ಅಲ್ಲದೆ ಚಿತ್ರದ ಸ್ಕ್ರಿಪ್ಟ್ ಮತ್ತು ರೀಲ್‌ಗಳನ್ನು ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿತ್ತು.

ಭಾಗ್ಯ ಕೃಷ್ಣಮೂರ್ತಿ ಎಂಬುವವರು 'ಅಭಿನೇತ್ರಿ ಅಂತರಂಗ' ಎಂಬ ಪುಸ್ತಕವನ್ನು ರಚಿಸಿದ್ದು, ಈ ಪುಸ್ತಕದಲ್ಲಿನ ಕಥೆಯನ್ನು ಆಧಾರವಾಗಿಟ್ಟುಕೊಂಡೇ ಪೂಜಾ ಗಾಂಧಿ ಅವರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಎಂಬುದು ಅವರ ವಾದ. ಅಂತೆಯೇ ಚಿತ್ರ ನಿರ್ಮಾಣಕ್ಕೂ ಮುನ್ನ ನನ್ನ ಅನುಮತಿ ಪಡೆಯದೆಯೇ ಅವರು ಚಿತ್ರ ನಿರ್ಮಿಸುತ್ತಿದ್ದಾರೆ. ಹೀಗಾಗಿ ಚಿತ್ರಕ್ಕೆ ತಡೆ ನೀಡಬೇಕು ಎಂದು ಭಾಗ್ಯ ಕೃಷ್ಣಮೂರ್ತಿ ಅವರು ಈ ಹಿಂದೆ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement