ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉತ್ತರಪ್ರದೇಶದಲ್ಲಿ ನಿಲ್ಲದ ಅತ್ಯಾಚಾರ, ಇಂದು ಮತ್ತೆರಡು ಪ್ರಕರಣ ಬೆಳಕಿಗೆ

Vishwanath S
Updated On : 12 Jun 2014, 1:51 am

ಹಮೀರ್‌ಪುರ್/ಮೊರಾದಾಬಾದ್: ಉತ್ತರಪ್ರದೇಶದ ಬದೌನ್ ಜಿಲ್ಲೆಯ ಇಬ್ಬರು ಬಾಲಕಿಯರ 'ಹತ್ಯಾ'ಚಾರ ಪ್ರಕರಣ ವಿರುದ್ಧ ದೇಶದೆಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದರು. ಗುರುವಾರ ಮತ್ತೇರಡು ಪ್ರಕರಣಗಳು ಬೆಳಕಿಗೆ ಬಂದಿದೆ.

ಅತ್ಯಾಚಾರಗಳನ್ನು ತಡೆಯಾಬೇಕಾದ ಕಾನೂನು ರಕ್ಷಕರಾದ ಪೊಲೀಸರೇ ಸಾಮೂಹಿಕ ಅತ್ಯಾಚಾರ ನಡೆಸಿ ಕ್ರೌರ್ಯ ಮೆರೆದಿದ್ದಾರೆ. ಹಮೀರ್‌ಪುರ್ ಜಿಲ್ಲೆಯ ಸುಮೇರ್‌ಪುರ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಪೊಲೀಸರು ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದು ವರದಿಯಾಗಿದೆ.

ಅತ್ಯಾಚಾರಕ್ಕೊಳಗಾದ ಮಹಿಳೆಯ ಪತಿಯನ್ನು ನಾಡಬಂದೂಕು ಹೊಂದಿದ್ದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಹೀಗಾಗಿ ಪತಿಯ ಬಿಡುಗಡೆಗಾಗಿ ಸೋಮವಾರ ರಾತ್ರಿ ಪೊಲೀಸ್ ಠಾಣೆಗೆ ತೆರಳಿದ್ದ ಮಹಿಳೆಯ ಮೇಲೆ ಠಾಣೆಯಲ್ಲೇ ಪೊಲೀಸ್ ಅಧಿಕಾರಿ ಮತ್ತು ಮೂವರು ಕಾನ್‌ಸ್ಟೇಬಲ್‌ಗಳು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನೊಂದ ಮಹಿಳೆ ಹಮೀರ್‌ಪುರ್ ಎಸ್‌ಪಿ ಅವರಿಗೆ ಬುಧವಾರ ದೂರು ಸಲ್ಲಿಸಿದ್ದು, ಠಾಣೆಯ ಒಳಗೆ ಪೊಲೀಸರು ನಿರಂತರವಾಗಿ 2 ಗಂಟೆಗಳ ಕಾಲ ಅತ್ಯಾಚಾರ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನನ್ವಯ ಹಮೀರ್‌ಪುರ್ ಠಾಣೆಯ ಅಧಿಕಾರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ಮೂವರು ಕಾನ್‌ಸ್ಟೇಬಲ್‌ಗಳು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೋದೆಡೆ, ಉತ್ತರಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದ ಇಬ್ಬರು ಬಾಲಕಿಯ ರೀತಿಯಲ್ಲೇ ಮತ್ತೊಂದು ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.

ಮೊರಾದಾಬಾದ್‌ನಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿ ಶವನ್ನು ಮರಕ್ಕೆ ನೇತು ಹಾಕಿದ್ದಾರೆ. ಬುಧವಾರ ಸಂಜೆಯ ವೇಳೆಗೆ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಲಾಗಿದೆ ಎಂದು ಮೃತ ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಕಳೆದ 10 ದಿನಗಳ ಒಳಗೆ ಬೆಳಕಿಗೆ ಬಂದ 12ನೇ ಅತ್ಯಾಚಾರ ಪ್ರಕರಣ ಇದಾಗಿದ್ದು, ಭಾರತದ ದೊಡ್ಡ ರಾಜ್ಯವಾಗಿರುವ ಉತ್ತರಪ್ರದೇಶ ಅತ್ಯಾಚಾರ ರಾಜ್ಯ ಎಂಬ ಕುಖ್ಯಾತಿಗೆ ಭಾಜನವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement