ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೆಂಪಯ್ಯ ನೇಮಕ ಕೇವಲ ವದಂತಿ: ಸಿಎಂ ಸ್ಪಷ್ಟನೆ

ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ತಮ್ಮ ಆಂತರಿಕ ಭದ್ರತಾ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳುವುದಿಲ್ಲ...

Lingaraj Badiger
Updated On : 12 Jun 2014, 12:43 pm

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ತಮ್ಮ ಆಂತರಿಕ ಭದ್ರತಾ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೆಂಪಯ್ಯ ನೇಮಕ ಕೇವಲ ವದಂತಿ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಹೇಳಿದರು.

ನಿವೃತ್ತ ಅಧಿಕಾರಿ ಕೆಂಪಯ್ಯ ಅವರನ್ನು ಮುಖ್ಯಮಂತ್ರಿಗಳ ಆಂತರಿಕ ಭದ್ರತಾ ಸಲಹೆಗಾರರ ಹುದ್ದೆಗೆ ನೇಮಕ ಮಾಡಿ, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲು ಸಿಎಂ ಮುಂದಾಗಿದ್ದರು. ಇದಕ್ಕೆ ಅವರ ಪಕ್ಷದಲ್ಲೇ ಅಪಸ್ವರ ಎದಿತ್ತು. ಈ ಸಂಬಂಧ ಕೆಲವು ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಅವರ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಸಿಎಂ ಸ್ವಜನ ಪಕ್ಷಪಾತ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement