ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೇವಾಲಯಗಳ ಮೇಲೆ ಉಗ್ರರ ದಾಳಿ ಸಾಧ್ಯತೆ: ಎಚ್ಚರ ವಹಿಸಲು ಕೇಂದ್ರ ಸೂಚನೆ

ಉತ್ತರಪ್ರದೇಶದ ಐತಿಹಾಸಿಕ ಸ್ಥಳಗಳ ಮೇಲೆ ಉಗ್ರರು ದಾಳಿ ನಡೆಸುವ...

Mainashree
Updated On : 12 Jun 2014, 3:39 am

ಲಖನೌ: ಉತ್ತರಪ್ರದೇಶದ ಐತಿಹಾಸಿಕ ಸ್ಥಳಗಳ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಹಿಂದೂ ದೇವಾಲಯಗಳು ಉತ್ತರಪ್ರದೇಶದಲ್ಲಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಉಗ್ರರು ಯಾವುದೇ ಕ್ಷಣದಲ್ಲಿ ಬೇಕಾದರೂ ದಾಳಿ ಮಾಡಬಹುದು. ಆದ್ದರಿಂದ ಎಲ್ಲಾ ದೇವಾಲಯಗಳ ಸುತ್ತಮುತ್ತಾ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಅಖಿಲೇಶ್ ಸರ್ಕಾರಕ್ಕೆ ಕೇಂದ್ರ ಸರ್ಕಾರ ಹೇಳಿದೆ.

ಆಯೋಧ್ಯ ಸೇರಿದಂತೆ ಐತಿಹಾಸಿಕ ದೇವಾಲಯಗಳ ಮೇಲೆ ಉಗ್ರರು ದಾಳಿ ಮಾಡಬಹುದು. ಈ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕಲ್ಪಿಸಿ ಹಾಗೂ ಉಗ್ರರ ನಿಗ್ರಹಕ್ಕೆ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement