ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ವಿಧಾನಪರಿಷತ್‌ಗೆ 7, ರಾಜ್ಯಸಭೆಗೆ 4 ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ವರು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ....

Mainashree
Updated On : 12 Jun 2014, 4:10 am

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ವರು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ಪ್ರಭಾಕರ್ ಕೋರೆ, ಕಾಂಗ್ರೆಸ್‌ನ ಬಿ.ಕೆ ಹರಿಪ್ರಸಾದ್, ಪ್ರೋ.ರಾಜೀವ್‌ಗೌಡ, ಜೆಡಿಎಸ್‌ನಿಂದ ಕುಪ್ಪೇಂದ್ರ ರೆಡ್ಡಿ ಆಯ್ಕೆಯಾಗಿದ್ದಾರೆ.

ವಿಧಾನಪರಿಷತ್ ಚುನಾವಣೆ
ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಓಂ ಪ್ರಕಾಶ್ ಅವರು ಅಧಿಕೃತ ಘೋಷಣೆ ಹೊರಡಿಸಿದ್ದು, 7 ಸದಸ್ಯರಿಗೆ ಪ್ರಮಾಣ ಪತ್ರ ನೀಡಿದ್ದಾರೆ.

ವಿಧಾನಪರಿಷತ್ ಚುನಾವಣೆಗೆ ಸ್ಪಧಿಸಿದ್ದ 7 ಅಭ್ಯರ್ಥಿಗಳಲ್ಲಿ, ಕಾಂಗ್ರೆಸ್‌ನಿಂದ 4, ಬಿಜೆಪಿಯಿಂದ 1, ಜೆಡಿಎಸ್‌ನಿಂದ 1, ಓರ್ವ ಸ್ವತಂತ್ರ ಅಭ್ಯರ್ಥಿ ಸ್ಪರ್ಧಿಸಿದ್ದರು.

ಈ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ, ಜೆಡಿಎಸ್‌ನಿಂದ ಟಿ.ಎ ಸರವಣ, ಸ್ವತಂತ್ರ ಅಭ್ಯರ್ಥಿ ಡಿ.ಯು ಮಲ್ಲಿಕಾರ್ಜನ್, ಕಾಂಗ್ರೆಸ್‌ನಿಂದ ಡಾ.ಜಿ ಪರಮೇಶ್ವರ್, ಹೆಚ್.ಎಂ ರೇವಣ್ಣ, ಜಯಮ್ಮ ಬಾಲರಾಜ್, ಬೋಸರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement