ಜೈಲಿನಲ್ಲಿ ಬಿಜೆಪಿ ಮುಖಂಡ ಯಶವಂತ್ ಸಿನ್ಹಾಗೆ ಗಾಯ
ಜೈಲಿನಲ್ಲಿರುವ ಬಿಜೆಪಿ ಮುಖಂಡ ಯಶವಂತ್ ಸಿನ್ಹಾ ಅವರು ಕುರ್ಚಿ ಮೇಲಿಂದ...
ಜಾರ್ಖಂಡ್: ಜೈಲಿನಲ್ಲಿರುವ ಬಿಜೆಪಿ ಮುಖಂಡ ಯಶವಂತ್ ಸಿನ್ಹಾ ಅವರು ಕುರ್ಚಿ ಮೇಲಿಂದ ಬಿದ್ದು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕುರ್ಚಿ ಮೇಲಿನಿಂದ ಬಿದ್ದಿದ್ದರಿಂದ ತಲೆಗೆ ಗಾಯವಾಗಿದೆ. ಸಿನ್ಹಾ ಅವರನ್ನು ಪರೀಕ್ಷಿಸಿದ ವೈದ್ಯರು ಸಿಟಿ ಸ್ಕ್ಯಾನ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಪ್ರಸ್ತುತ ಜಾರ್ಖಂಡ್ನ ರಾಂಚಿಯಲ್ಲಿರುವ ಹಝಾರಿಬಾಗ್ ಜೈಲಿನಲ್ಲಿರುವ ಸಿನ್ಹಾ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದರು.
ಅನಿಯಮಿತ ವಿದ್ಯುತ್ ಲೋಡ್ಶೆಡ್ಡಿಂಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಿನ್ಹಾ, ವಿದ್ಯುತ್ ಇಲಾಖೆ ಅಧಿಕಾರಿಗಳನ್ನು ಥಳಿಸುವಂತೆ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆಗಳು ಪ್ರಚೋದನಾಕಾರಿಯಾಗಿದ್ದು, ಸಿನ್ಹಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಸಿನ್ಹಾ ಅವರನ್ನು ಪೊಲೀಸರು ಬಂಧಿಸಿದ್ದರು. ಜಾಮೀನು ನಿರಾಕರಿಸಿದ ಸಿನ್ಹಾ ಜೈಲಿಗೆ ಹೋಗಿದ್ದರು.