ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಗಡಿಯಲ್ಲಿ ಗುಂಡಿನ ದಾಳಿ

ಕೇಂದ್ರದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯಲ್ಲಿ...

Vishwanath S
Updated On : 13 Jun 2014, 12:30 pm

ಜಮ್ಮು ಮತ್ತು ಕಾಶ್ಮೀರ: ಕೇಂದ್ರದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ.

ಜಮ್ಮುವಿನ ಮೇಂದಾರ್ ಸೆಕ್ಟರ್ ಹಾಗೂ ಬಾಲ್‌ಕೋಟ್ ಪ್ರದೇಶದಲ್ಲಿ ಪಾಕ್ ಸೈನಿಕರು ಇಂದು ಮುಂಜಾನೆ 7 ಗಂಟೆಯ ಸುಮಾರಿನಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಸಹ ಗುಂಡಿನ ದಾಳಿ ನಡೆಸಿದರು.

ಪಾಕಿಸ್ತಾನ ಸೈನಿಕರು ಸಣ್ಣ ಶಸ್ತ್ರಾಸ್ತ್ರ ಹಾಗೂ ರಾಕೆಟ್‌ಗಳ ಮೂಲಕ ದಾಳಿ ನಡೆಸಿದ್ದು, ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹಿರಿಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಟ್ವೀಟ್ ಮಾಡಿದ್ದಾರೆ. ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿ ದಾಳಿ ನಡೆಸಿದ್ದು, ಪಾಕ್ ಸೈನಿಕರು ಸಿಡಿಸಿದ ಶೆಲ್ಸ್‌ಗಳು ರಜೋರಿ ಮತ್ತು ಪೂಂಚ್‌ನ ನಾಗರಿಕ ಪ್ರದೇಶದಲ್ಲಿ ಬಿದ್ದಿವೆ ಎಂದು ತಿಳಿಸಿದ್ದಾರೆ.

ಕಾಕತಾಳಿಯವೆಂಬಂತೆ ರಕ್ಷಣಾ ಸಚಿವರು ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಬಂದು ಹೋದ ಬಳಿಕ ಪಾಕ್ ಸೈನಿಕರು ದಾಳಿ ನಡೆಸಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಬಿಮ್ಬೇರ್ ಗಲಿ ಸೆಕ್ಟರ್ ಬಳಿ ನಿನ್ನೆ ಐಇಡಿ ಬಾಂಬ್ ಸ್ಪೋಟದಲ್ಲಿ ಓರ್ವ ಯೋಧ ಮೃತಪಟ್ಟಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದರು. ಮತ್ತೊಂದು ಪ್ರಕರಣದಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದ ಘಟನೆ ವರದಿಯಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement