ಕಾವೇರಿ ವಿಚಾರದಲ್ಲಿ ಜಯಲಲಿತಾ ರಾಜಕಾರಣ: ಅನಂತಕುಮಾರ್
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ತಮಿಳುನಾಡು...
ಚಿತ್ರದುರ್ಗ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೇಳಿದ್ದಾರೆ.
ಕೇಂದ್ರ ರಾಸಾಯನಿಕ, ರಸಗೊಬ್ಬರ ಸಚಿವ ಅನಂತಕುಮಾರ್ ಅವರು ಇಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು ಜಯಲಲಿತಾ ಅವರು ಮಂಡಳಿ ರಚನೆ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜಯಲಲಿತಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಕಾವೇರಿ ನದಿ ನಮ್ಮ ನಾಡಿನ ಜೀವನನದಿಯಾಗಿದೆ ಎಂದು ಹೇಳಿದ್ದಾರೆ.