ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಿಡಿಗೇಡಿಗಳನ್ನು ಮಟ್ಟ ಹಾಕುವ ಸಾಮರ್ಥ್ಯ ಭಾರತೀಯ ಸೇನೆಗಿದೆ: ಜೇಟ್ಲಿ

ಕದನ ವಿರಾಮ ಉಲ್ಲಂಘನೆ ಮಾಡಿದವರನ್ನು ಮಟ್ಟ ಹಾಕುವುದಕ್ಕೆ ಭಾರತೀಯ...

Mainashree
Updated On : 14 Jun 2014, 3:27 am

ಶ್ರೀನಗರ: ಕದನ ವಿರಾಮ ಉಲ್ಲಂಘನೆ ಮಾಡಿದವರನ್ನು ಮಟ್ಟ ಹಾಕುವುದಕ್ಕೆ ಭಾರತೀಯ ಸೇನೆಗೆ ಇರುವ ಸಾಮರ್ಥ್ಯ ಸಾಕು ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಶನಿವಾರ ಹೇಳಿದ್ದಾರೆ.

ಇಂದು ಶ್ರೀನಗರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಗಡಿ ದಾಟಿ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನದ ಸೈನಿಕರನ್ನು ಮಟ್ಟ ಹಾಕುವುದಕ್ಕೆ ಭಾರತೀಯ ಸೇನಾಪಡೆಗೆ ಈಗಿರವ ಬಲ ಸಾಕಾಗಿದೆ ಎಂದು ತಿಳಿಸಿದ್ದಾರೆ.

ನಿನ್ನೆಯಷ್ಟೇ ಜಮ್ಮು ಕಾಶ್ಮೀರದಲ್ಲಿ ಪಾಕ್ ಸೈನಿಕರು ಗಡಿ ನಿಯಮ ಉಲ್ಲಂಘಿಸಿ ಭಾರತೀಯ ಸೇನಾ ಪಡೆಯ ಮೇಲೆ ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಜೇಟ್ಲಿ ಇಂದು ಶ್ರೀನಗರಕ್ಕೆ ಭೇಟಿ ನೀಡಿದ್ದಾರೆ.

ನಾನು ಇಲ್ಲಿನ ಭದ್ರತಾ ಕುರಿತು ಅಧಿಕಾರಿಗಳೊಂದಿಗೆ ಹಾಗೂ ಭಾರತೀಯ ಸೇನಾ ಪಡೆಯೊಂದಿಗೆ ಇಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸಲು ಬಂದಿದ್ದೇನೆ.

ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜೇಟ್ಲಿ ತಿಳಿಸಿದ್ದಾರೆ.

ನಾಳೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್, ರಾಜ್ಯಪಾಲ ಎನ್.ಎನ್ ವೋಹ್ರಾ ಅವರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement