ಖರ್ಗೆಗೆ ಪ್ರತಿಪಕ್ಷ ನಾಯಕ ಸ್ಥಾನ ನೀಡದಿದ್ದರೇ ಕಾನೂನು ಮೊರೆ: ಕಾಂಗ್ರೆಸ್
ಒಂದು ವೇಳೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ...
ನವದೆಹಲಿ: ಒಂದು ವೇಳೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷದ ನಾಯಕ ಸ್ಥಾನ ನೀಡಲು ನೀರಾಕರಿಸಿದರೆ ಕಾಂಗ್ರೆಸ್ ಪಕ್ಷ ಕಾನೂನು ಹೋರಾಟ ನಡೆಸಲಿದೆ ಕಾಂಗ್ರೆಸ್ ವಕ್ತಾರ ಶಖೀಲ್ ಅಹಮದ್ ಹೇಳಿದ್ದಾರೆ.
ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು ಆಯ್ಕೆ ಮಾಡಿದ್ದು. ಒಂದು ವೇಳೆ ಖರ್ಗೆ ಅವರಿಗೆ ನಾಯಕ ಸ್ಥಾನವನ್ನು ನಿರಾಕರಿಸಿದರೇ, ಕಾಂಗ್ರೆಸ್ ಕಾನೂನು ಮೊರೆ ಹೋಗಲಿದೆ ಎಂದು ಅವರು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ ಸ್ಥಾನಕ್ಕೆ ಯಾರು ಅರ್ಹ ಎಂಬ ಗೊಂದಲ ಮೂಡಿದ್ದು, ಪ್ರತಿಪಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಹೋರಾಟ ನಡೆಸಲು ಮುಂದಾಗಿದೆ.