ನಾಳೆ ಭೂತಾನ್ಗೆ ಪ್ರಧಾನಿ ಮೋದಿ ಭೇಟಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಭೂತಾನ್ಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಭೂತಾನ್ಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೂನ್ 15 ಮತ್ತು 16ರಂದು ಮೋದಿ ಅವರು ಭೂತಾನ್ ಪ್ರವಾಸ ಕೈಗೊಳ್ಳಲಿದ್ದು, ವಿದೇಶಾಂಗ ಸಚಿವೆ ಸುಷ್ಮಾಸ್ವರಾಜ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಧಾನಿಯೊಂದಿಗೆ ಭೂತಾನ್ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಸುಜಾತ ಸಿಂಗ್ ತಿಳಿಸಿದ್ದಾರೆ.
ಭೂತಾನ್ ರಾಜ ಜಿಗ್ಮೇ ಕೇಸರ್ ನಾಮಗ್ಯಲ್ ವಾಂಗ್ ಚುಕ್ ಅವರು ತಮ್ಮ ದೇಶಕ್ಕೆ ಭೇಟಿ ನೀಡುವಂತೆ ಮೋದಿ ಅವರಿಗೆ ಆಹ್ವಾನವಿತ್ತಿದ್ದರು. ಈ ಹಿನ್ನಲೆಯಲ್ಲಿ ಮೋದಿ ಅವರು ಭೂತಾನ್ಗೆ ಪ್ರವಾಸ ಕೈಗೊಂಡಿದ್ದು, ಇದೊಂದು ಸದ್ಭಾವನಾ ಭೇಟಿಯಾಗಿದೆ ಎಂದು ಅವರು ಹೇಳಿದ್ದಾರೆ.
ಭೂತಾನ್ ರಾಷ್ಟ್ರೀಯ ಪರಿಷತ್ ಸಭೆಯನ್ನುದ್ದೇಶಿಸಿ ಮೋದಿ ಭಾಷಣ ಮಾಡಲಿದ್ದು, ಅಲ್ಲಿನ ನಾಯಕರು ಮತ್ತು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಹಾಗೂ ಉಭಯ ದೇಶಗಳ ಸಂಬಂಧ ಗಟ್ಟಿಗೊಳಿಸುವುದರ ಬಗ್ಗೆ ಚರ್ಚಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.