ಪ್ರೀತಿಗೆ ಲೈಂಗಿಕ ಕಿರುಕುಳ: ಇಬ್ಬರ ಹೇಳಿಕೆ ಪಡೆದ ಪೊಲೀಸರು
ಬಾಲಿವುಡ್ ನಟಿ ಪ್ರೀತಿ ಜಿಂಟಾಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧಪಟ್ಟಂತೆ...
ಮುಂಬೈ: ಬಾಲಿವುಡ್ ನಟಿ ಪ್ರೀತಿ ಜಿಂಟಾಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧಪಟ್ಟಂತೆ ಮುಂಬೈ ಪೊಲೀಸರು ಇಬ್ಬರ ಹೇಳಿಕೆಯನ್ನು ಧ್ವನಿ ಮುದ್ರಣೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇ 30ರಂದು ವಾಂಕೇಡ್ ಸ್ಟೇಡಿಯಂನಲ್ಲಿ ಪ್ರೀತಿ ಜಿಂಟಾ ಮತ್ತು ವಾಡಿಯಾ ನಡುವೆ ನಡೆದ ವಾಗ್ವಾದ ವೇಳೆ ಅಲ್ಲಿ ಹಾಜರಿದ್ದ ಇಬ್ಬರ ಹೇಳಿಕೆಯನ್ನು ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆದರೆ, ಆ ಇಬ್ಬರು ವ್ಯಕ್ತಿಗಳು ಯಾರೆಂದು ಪೊಲೀಸರು ಗೌಪ್ಯವಾಗಿಟ್ಟಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ಪ್ರೀತಿ ಜಿಂಟಾ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಉದ್ಯಮಿ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ವಿರುದ್ಧ ದೂರು ದಾಖಲಿಸಿದ್ದರು.
ವಾಡಿಯಾ ಅವರು ಐಪಿಎಲ್ ಪಂದ್ಯದ ವೇಳೆ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರೀತಿ ಜಿಂಟಾ ಮುಂಬೈನ ಮರಿನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ವಾಡಿಯಾ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
44 ವರ್ಷದ ಉದ್ಯಮಿ ನೆಸ್ ವಾಡಿಯಾ ಹಾಗೂ 39 ವರ್ಷದ ನಟಿ ಪ್ರೀತಿ ಜಿಂಟಾ ಇಬ್ಬರು ಪಂಜಾಬ್ ತಂಡದ ಮಾಲೀಕರಾಗಿದ್ದು, ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸುದ್ದರು. ಆದರೆ ಇತ್ತೀಚೆಗೆ ಇಬ್ಬರೂ ದೂರವಾಗಿದ್ದರು.