ಮಂಗಳೂರು ಏರ್ಪೋರ್ಟ್ ದಾಳಿಗೆ ಉಗ್ರರ ಸಂಚು: ಬಿಗಿ ಭದ್ರತೆ
ಮಂಗಳೂರು ವಿಮಾನ ನಿಲ್ದಾಣದ ಮೇಲೆ ಉಗ್ರರು ದಾಳಿ ಮಾಡುವ ಸಾಧ್ಯತೆ ಇದೆ...
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಮೇಲೆ ಉಗ್ರರು ದಾಳಿ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರು ಬಜ್ಪೆ ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಉಗ್ರರು ಸಂಚು ರೂಪಿಸಿದ್ದು, ಯಾವುದೇ ಕ್ಷಣದಲ್ಲಿ ಬೇಕಾದರು ದಾಳಿ ಮಾಡಬಹುದು ಎಂದು ಗುಪ್ತಚರ ಇಲಾಖೆ ತಿಳಿಸಿದೆ.
ಈ ಹಿನ್ನಲೆಯಲ್ಲಿ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ವಿಮಾನದ ಸುತ್ತಮುತ್ತಲಿನ ಪ್ರದೇಶದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಂಧಕ್ಕೊಳಗಾಗಿರುವ ಉಗ್ರ ಯಾಸಿನ್ ಭಟ್ಕಳ್ ಹಾಗೂ ಅವನ ಅನುಯಾಯಿಗಳು ಕೇರಳ ಕರ್ನಾಟಕದ ಗಡಿ ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನಲೆಯಲ್ಲಿ ಉಗ್ರರು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡವ ಸಾಧ್ಯತೆ ಇದೆ ಎಂಬ ಮಾಹಿತಿ ಹೊರಬಿದ್ದಿದೆ.