ಮನಾಲಿ ದುರಂತ: ಕೊಚ್ಚಿಹೋದ ವಿದ್ಯಾರ್ಥಿಗಳ ಪತ್ತೆಗಾಗಿ ಹೈಟೆಕ್ ಸಾಧನ
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಕಳೆದ ಭಾನುವಾರ ಪ್ರವಾಹದಲ್ಲಿ...
ಮನಾಲಿ: ಹಿಮಾಚಲ ಪ್ರದೇಶದ ಮಂಡಿಯಲ್ಲಿ ಕಳೆದ ಭಾನುವಾರ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಹೈದ್ರಾಬಾದ್ನ ವಿದ್ಯಾರ್ಥಿಗಳ ಪತ್ತೆಗಾಗಿ ಹೈಟೆಕ್ ಸಾಧನ ಬಳಕೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ನೀರು ಪಾಲಾದ ವಿದ್ಯಾರ್ಥಿಗಳಲ್ಲಿ ಕೆಲವರ ಮೃತದೇಹ ಪತ್ತೆಯಾಗಿದ್ದು, ಇನ್ನು 16 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಕಳೆದ ಭಾನುವಾರದಿಂದಲೇ ವಿದ್ಯಾರ್ಥಿಗಳ ಪತ್ತೆಗಾಗಿ ಸರ್ಕಾರ ರಕ್ಷಣಾ ಸಿಬ್ಬಂದಿಗಳನ್ನು ನೇಮಿಸಿತ್ತು.
ಆದರೆ, ಇದುವರೆಗೂ ಕೇವಲ 8 ಮೃತದೇಹ ಪತ್ತೆಯಾಗಿದ್ದು, ಇನ್ನೂ 16 ವಿದ್ಯಾರ್ಥಿಗಳ ಸುಳಿವು ಸಿಕ್ಕಿಲ್ಲ. ಈ ಹಿನ್ನಲೆಯಲ್ಲಿ ಹೈಟೆಕ್ ಸಾಧನ ಬಳಸಿ ಉಳಿದ ವಿದ್ಯಾರ್ಥಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.