ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಖಿಲೇಶ್ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಉತ್ತರಪ್ರದೇಶದಲ್ಲಿ ಅಖಿಲೇಶ್ ನೇತೃತ್ವದ ಸಮಾಜವಾದಿ ಸರ್ಕಾರ ಕಾನೂನು ನಿಯಮಗಳಿಗೆ ಬದ್ಧರಾಗಬೇಕೆಂದು...

Rashmi Kasaragodu
Updated On : 16 Jun 2014, 5:07 am

ಉತ್ತರಪ್ರದೇಶ: ಉತ್ತರಪ್ರದೇಶದಲ್ಲಿ ಅಖಿಲೇಶ್ ನೇತೃತ್ವದ ಸಮಾಜವಾದಿ ಸರ್ಕಾರ ಕಾನೂನು ನಿಯಮಗಳಿಗೆ ಬದ್ಧರಾಗಬೇಕೆಂದು ಕೇಂದ್ರ ಸರ್ಕಾರ ಹೇಳಿದೆ.

ಬೇರೊಂದು ಪಕ್ಷ ಆಡಳಿತ ನಡೆಸುತ್ತಿದ್ದೆ ಎಂದು ನಾವು ಇಲ್ಲಿ ದೂರುತ್ತಿಲ್ಲ. ಆದರೆ ಸರ್ಕಾರ ನಡೆಸುವ ಪಕ್ಷ ನಮ್ಮದಾಗಿರಲಿ ಅಥವಾ ಇನ್ಯಾವುದೇ ಪಕ್ಷವೇ ಆಗಿರಲಿ ರಾಜ್ಯದಲ್ಲಿ ಕಾನೂನು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಅದೇ ವೇಳೆ ನಾನಿಲ್ಲಿ ಗೃಹ ಸಚಿವಾಲಯದ ಸಚಿವನಾಗಿರುವಾಗ ಇದರ ಬಗ್ಗೆ ಗಮನ ಹರಿಸಬೇಕಾಗುವುದು ನನ್ನ ಕರ್ತವ್ಯ ಎಂದು ಗೃಹ ಸಚಿವಾಲಯದ ರಾಜ್ಯ ಸಚಿವ ಕಿರಣ್ ರಿಜ್ಜು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿನ ಆಡಳಿತಾರೂಡ ಸಮಾಜವಾದಿ ಪಕ್ಷದ ವಿರುದ್ಧ ಕಿಡಿ ಕಾರಿದ ಹಿರಿಯ ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವೀ ಸರ್ಕಾರ ಕಾನೂನು ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂಬುದು ಸ್ಪಷ್ಟ ಎಂದು ಹೇಳಿದ್ದಾರೆ.  ಅದೇ  ವೇಳೆ ಉತ್ತರ ಪ್ರದೇಶದಲ್ಲಿನ ಕಾನೂನು ನಿಯಮಗಳ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಇಲ್ಲಿ ನಡೆಯುತ್ತಿರುವ ಘಟನೆಗಳು ದುರದೃಷ್ಟಕರ ಎಂದು ಹೇಳಿದ ಕಾಂಗ್ರೆಸ್‌ನ ಮಾಜಿ ಸಂಸದ ರಶೀದ್ ಆಳ್ವಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಆದಾಗ್ಯೂ, ತಮ್ಮ ಪಕ್ಷ ಅಖಿಲೇಶ್ ಯಾದವ್ ರಾಜಿನಾಮೆ ನೀಡಬೇಕೆಂದು ಒತ್ತಾಯಿಸುತ್ತಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement