ಮಹಿಳೆಯ ರಕ್ಷಣೆಗೆ ಮೊದಲ ಆದ್ಯತೆ: ರಾಜನಾಥ್ ಸಿಂಗ್
ರಾಷ್ಟ್ರ ರಾಜಧಾನಿ ದೆಹಲಿಯ ಮಹಿಳೆಯರಿಗೆ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮಹಿಳೆಯರಿಗೆ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಸೋಮವಾರ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಇಂದು ದೆಹಲಿ ಪೊಲೀಸ್ ಕಚೇರಿಗೆ ಭೇಟಿ ನೀಡಿದ ರಾಜನಾಥ್ ಸಿಂಗ್, ಮಹಿಳೆಯರಿಗೆ ಭದ್ರತೆ ಒದಗಿಸುವುದು ಹಾಗೂ ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತಂತೆ ಮಾತುಕತೆ ನಡೆಸಿದರು. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ದೆಹಲಿಯಲ್ಲಿ ಡಿಸೆಂಬರ್ 16ರಂದು ನಡೆದ ನಿರ್ಭಯ ಅತ್ಯಾಚಾರ ಪ್ರಕರಣ ನಂತರ ದೆಹಲಿಯಲ್ಲಿನ ಮಹಿಳೆಯರ ಸುರಕ್ಷತೆ ಬಗ್ಗೆ ಟೀಕೆಗಳು ಕೇಳಿ ಬಂದಿದ್ದವು.