ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜು.9ಕ್ಕೆ ರೇಲ್ವೆ, 11ಕ್ಕೆ ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು 2014-15ನೇ ಸಾಲಿನ ಕೇಂದ್ರ ಬಜೆಟ್‌ನ್ನು ಜುಲೈ 11ಕ್ಕೆ ಸಂಸತ್ತಿನಲ್ಲಿ..

Lingaraj Badiger
Updated On : 18 Jun 2014, 7:11 am

ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು 2014-15ನೇ ಸಾಲಿನ ಕೇಂದ್ರ ಬಜೆಟ್‌ನ್ನು ಜುಲೈ 11ಕ್ಕೆ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ. ಜೇಟ್ಲಿ ಅವರಿಗೆ ವಿತ್ತ ಸಚಿವರಾಗಿ ಮಂಡಿಸುತ್ತಿರುವ ಮೊದಲ ಬಜೆಟ್ ಇದಾಗಿದೆ.

ಜುಲೈ 7ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 9ಕ್ಕೆ ರೇಲ್ವೆ ಸಚಿವ ಡಿ.ವಿ.ಸದಾನಂದಗೌಡ ಅವರು ರೇಲ್ವೆ ಬಜೆಟ್‌ನ್ನು ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅರುಣ್ ಜೇಟ್ಲಿ ಅವರ ಮಧ್ಯಂತರ ಬಜೆಟ್ ಇದಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನೀತಿ ನಿರೂಪಣೆಯಲ್ಲಿ ಈ ಬಜೆಟ್ ಪ್ರಮುಖ ಪಾತ್ರ ವಹಿಸಲಿದೆ ಮತ್ತು ಆರ್ಥಿಕ ಉತ್ತೇಜನಕ್ಕೆ ಸ್ಪಷ್ಟ ನಿರ್ದೇಶನ ನೀಡುವ ಸಾಧ್ಯತೆ ಇದೆ.

ಜೇಟ್ಲಿ ಅವರು ಈಗಾಗಲೇ ಬಜೆಟ್ ಸಿದ್ಧತೆ ಕಾರ್ಯದಲ್ಲಿ ತೊಡಗಿಕೊಂಡಿದ್ದು, ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಚರ್ಚಿಸುತ್ತಿದ್ದಾರೆ. ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ಜೇಟ್ಲಿ ಮುಂದೆ ಹಲವು ಸವಾಲುಗಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement