ಅಧಿವೇಶನದ ಬಳಿಕ ಸಂಪುಟ ಪುನಾ ರಚನೆ: ಕೆಲವರಿಗೆ ಕೊಕ್, ಕೆಲವರ ಖಾತೆ ಬದಲು
ವಿಧಾಸಭಾ ಅಧಿವೇಶನದ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ..
ಬೆಂಗಳೂರು: ಸೋಮವಾರದಿಂದ ಆರಂಭವಾಗುವ ವಿಧಾಸಭಾ ಅಧಿವೇಶನದ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಕೆಲವು ಸಚಿವರ ಕಾರ್ಯನಿರ್ವಹಣೆ ಬಗ್ಗೆ ಅಸಮಾಧಾನ ಇದ್ದು, ಅಂಥವರನ್ನು ಸಚಿವ ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಮತ್ತು ಕೆಲವು ಸಚಿವರ ಖಾತೆ ಬದಲಾವಣೆ ಮಾಡುವು ಸಾಧ್ಯತೆಯೂ ಇದೆ ಎಂದರು.
ಇದೇ ವೇಳೆ ತಾವು ಸಿದ್ದರಾಮಯ್ಯ ಸಂಪುಟ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಪ್ರಮೇಶ್ವರ, ತಮಗೆ ಸಚಿವ ಸ್ಥಾನ ಅಥವಾ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು. ಒಂದು ವೇಳೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಸ್ವಾಗತಿಸುವೆ ಎಂದು ಪರಮೇಶ್ವರ ಹೇಳಿದ್ದಾರೆ.
ಈ ವೇಳೆ ಜೂನ್ 28 ಮತ್ತು 29ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದರು.