ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉದ್ಧವ್ ಠಾಕ್ರೆ ಶಿವಸೇನಾ ಸಿಎಂ ಅಭ್ಯರ್ಥಿ: ರಾವತ್

ಈ ವರ್ಷಾಂತ್ಯಕ್ಕೆ ನಡೆಯುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಶಿವಸೇನೆ ಸನ್ನದ್ದವಾಗಿದ್ದು,

Lingaraj Badiger
Updated On : 19 Jun 2014, 4:04 am

ಮುಂಬೈ: ಈ ವರ್ಷಾಂತ್ಯಕ್ಕೆ ನಡೆಯುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಶಿವಸೇನೆ ಸನ್ನದ್ದವಾಗಿದ್ದು, ಗುರುವಾರ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ.

ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೇ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ, ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ಮುಂದೆ ಒಂದೇ ಹೆಸರಿದ್ದು, ಅದು ಉದ್ಧವ್ ಠಾಕ್ರೆ ಎಂದು ಪಕ್ಷದ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ. ಅಲ್ಲದೆ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಪಕ್ಷ ಬಹುಮತ ಪಡೆಯಲಿದೆ ಎಂದು ಹೇಳಿದ್ದಾರೆ.

ಎನ್‌ಡಿಎ ಮೈತ್ರಿಕೂಟದಲ್ಲಿರುವ ಶಿವಸೇನೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಯಾವುದೇ ಸ್ಥಾನ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ರಾವತ್ ಸ್ಪಷ್ಟಪಡಿಸಿದ್ದಾರೆ.

ಶಿವಸೇನಾದವರೇ ಮುಖ್ಯಮಂತ್ರಿಯಾಗಬೇಕು ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲೇ ಮುಂದಿನ ಸರ್ಕಾರ ರಚನೆಯಾಗಬೇಕು ಎಂದು ರಾವತ್ ಹೇಳಿದ್ದು, ಇದರಿಂದ ಬಿಜೆಪಿಯೊಂದಿಗನ ಮೈತ್ರಿ ಮುರಿದು ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮೈತ್ರಿಕೂಟದಲ್ಲಿ ತನಗೆ ಹೆಚ್ಚಿನ ಸ್ಥಾನ ನೀಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement