ದೆಹಲಿ, ಮುಂಬೈಯಲ್ಲಿ ಉಗ್ರರ ದಾಳಿ ಸಾಧ್ಯತೆ: ಎನ್‌ಐಎ
ರಾಷ್ಟ್ರರಾಜಧಾನಿ ದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈಯಲ್ಲಿ ..
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈಯಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶುಕ್ರವಾರ ಎಚ್ಚರಿಕೆ ನೀಡಿದೆ.
ಉಗ್ರರ ದಾಳಿಯ ಬಗ್ಗೆ ಎಚ್ಚರಿಕೆ ರವಾನಿಸಿರುವ ಕೇಂದ್ರ ಸಂಸ್ಥೆ, ಎರಡೂ ನಗರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ದೆಹಲಿ ಹಾಗೂ ಮುಂಬೈ ಪೊಲೀಸರಿಗೆ ಸೂಚಿಸಿದೆ.
ಈ ಸಂಬಂಧ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವ ಎನ್‌ಐಎ, ಕೆಲವು ಉಗ್ರ ಸಂಘಟನೆಗಳು ಮುಂಬೈ ಮತ್ತು ದೆಹಲಿಯಲ್ಲಿರುವ ಪ್ರಸಿದ್ಧ ಕಟ್ಟಡಗಳ ಮೇಲೆ ಮತ್ತು ಸ್ಮಾರಕಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿವೆ. ಉಗ್ರ ಸಂಘಟನೆ ಇಂಡಿಯನ್ ಮುಜಾಹಿದ್ದೀನ್(ಐಎಂ) ಲೋಟಸ್ ಟೆಂಪಲ್, ಖುದಬ್ ಮಿನಾರ್ ಮತ್ತು ಅನಂದ್ ವಿಹಾರ್ ಸೇರಿದಂತೆ ಇತರೆ ಸ್ಥಳಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದೆ.