ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜನಾಥ್ ಭೇಟಿ ಮಾಡಿದ ನಿಹಾಲ್ ಚಂದ್

ಜೈಪುರ ಮೂಲದ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪಕ್ಕೆಸಿಲುಕಿರುವ ಕೇಂದ್ರ ಸಚಿವ ನಿಹಾಲ್ ಚಂದ್..

Srinivasa Murthy VN
Updated On : 20 Jun 2014, 5:30 am

ನವದೆಹಲಿ: ಜೈಪುರ ಮೂಲದ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪಕ್ಕೆ ಸಿಲುಕಿರುವ ಕೇಂದ್ರ ಸಚಿವ ನಿಹಾಲ್ ಚಂದ್ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಮೂರು ವರ್ಷಗಳ ಹಿಂದಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಹಾಲ್ ಚಂದ್ ಅವರ ರಾಜಿನಾಮೆಗೆ ಪ್ರತಿ ಪಕ್ಷಗಳಿಂದ ಒತ್ತಡ ಹೆಚ್ಚಾಗಿದ್ದು, ಕಾಂಗ್ರೆಸ್ ಪಕ್ಷದ ಮಹಿಳಾ ಘಟಕ ನಿಹಾಲ್ ಚಂದ್ ರಾಜಿನಾಮೆ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ. ಈ ಬಗ್ಗೆ ನಿನ್ನೆ ತಮ್ಮ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದ ನಿಹಾಲ್ ಚಂದ್ ಅವರು ಯಾವುದೇ ಕಾರಣಕ್ಕೂ ತನ್ನದಲ್ಲದ ತಪ್ಪಿಗೆ ರಾಜಿನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಕೇಂದ್ರ ಸಚಿವ ನಿಹಾಲ್ ಚಂದ್ ಅವರ ಅತ್ಯಾಚಾರ ಪ್ರಕರಣ ಇದೀಗ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಸೇರಿದಂತೆ ಕೆಲ ಮಹಿಳಾ ಸಂಘಟನೆಗಳು ಕೂಡ ನಿಹಾಲ್ ಚಂದ್ ಅವರ ರಾಜಿನಾಮೆಗೆ ಆಗ್ರಹಿಸಿದೆ. ಇದಕ್ಕೂ ಮೊದಲು ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾಗುತ್ತಿರುವ ವಿವಾಹಿತ ಯುವತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ತಮಗೆ ಕೇವಲ 2 ನಿಮಿಷ ಕಾಲಾವಕಾಶ ಕೊಟ್ಟರೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರ ನೀಡುತ್ತೇನೆ ಎಂದು ಹೇಳಿದ್ದರು. ಅಲ್ಲದೆ ಪ್ರಕರಣವನ್ನು ಕೂಡಲೇ ಹಿಂಪಡೆದುಕೊಳ್ಳುವಂತೆ ಹಲವು ಬೆದರಿಕೆ ಕರೆಗಳು ಬರುತ್ತಿದ್ದು, ಪ್ರಕರಣ ಹಿಂಪಡೆದರೆ ಉದ್ಯೋಗ ನೀಡುವುದಾಗಿ ಕೆಲವರು ಆಮಿಷ ಒಡ್ಡಿದ್ದಾರೆ ಎಂದು ಆ ಯುವತಿ ಆರೋಪಿಸಿದ್ದಾಳೆ.

ಇದನ್ನೇ ಮುಂದಿಟ್ಟುಕೊಂಡಿರುವ ಕಾಂಗ್ರೆಸ್ ಪಕ್ಷ ನಿಹಾಲ್ ಚಂದ್ ಅವರ ರಾಜಿನಾಮೆಗೆ ಒತ್ತಾಯಿಸಿದೆ. ಆದರೆ ಕಾಂಗ್ರೆಸ್ ಪಕ್ಷದ ಆರೋಪಗಳನ್ನು ನಿರಾಕರಿಸಿರುವ ಆಡಳಿತಾ ರೂಢ ಬಿಜೆಪಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ನಿಹಾಲ್ ಚಂದ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಆದರೆ ಇದೀಗ ಮತ್ತೆ ಅದೇ ಪ್ರಕರಣವನ್ನು ಮುಂದಿಟ್ಟುಕೊಂಡು ನಿಹಾಲ್ ಚಂದ್ ಅವರ ರಾಜಿನಾಮೆಗೆ ಒತ್ತಾಯಿಸುತ್ತಿದೆ. ಯಾವುದೇ ಕಾರಣಕ್ಕೂ ನಿಹಾಲ್ ಚಂದ್ ಅವರ ರಾಜಿನಾಮೆ ಸಾಧ್ಯವಿಲ್ಲ ಎಂದು ಬಿಜೆಪಿ ಮುಖಂಡ ಶಹನವಾಜ್ ಹುಸ್ಸೇನ್ ಹೇಳಿದ್ದಾರೆ.

2010ರಲ್ಲಿ ರಾಜಸ್ತಾನದ ಜೈಪುರದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಪ್ರಕರಣ ಸಂಬಂಧ ಇದೀಗ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯ ರಾಜ್ಯ ಸಚಿವ ನಿಹಾಲ್ ಚಂದ್ ಮೇಘ್ವಾಲ್ ಅವರು ರಾಜಿನಾಮೆಯ ಭೀತಿ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement