ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಮೆರಿಕ ಜಂಟಿ ಅಧಿವೇಶನ ಉದ್ದೇಶಿಸಿ ಮೋದಿ ಭಾಷಣ?

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೀಸಾ ನಿರಾಕರಿಸಿ, ತನ್ನ ದೇಶದೊಳಕ್ಕೆ ಬಿಟ್ಟುಕೊಳ್ಳಲು ಹಿಂದೇಟು ಹಾಕಿದ್ದ ಅಮೆರಿಕ ಈಗ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವಂತೆ ಆಹ್ವಾನ ನೀಡಲು ಮುಂದಾಗಿದೆ.

Lingaraj Badiger
Updated On : 21 Jun 2014, 1:30 am

ವಾಷಿಂಗ್ಟನ್: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೀಸಾ ನಿರಾಕರಿಸಿ, ತನ್ನ ದೇಶದೊಳಕ್ಕೆ ಬಿಟ್ಟುಕೊಳ್ಳಲು ಹಿಂದೇಟು ಹಾಕಿದ್ದ ಅಮೆರಿಕ ಈಗ ಜಂಟಿ ಅಧಿವೇಶನ ಕಾಂಗ್ರೆಸ್‌ನ್ನು ಉದ್ದೇಶಿಸಿ ಮಾತನಾಡುವಂತೆ ಮೋದಿಗೆ ಆಹ್ವಾನ ನೀಡಲು ಮುಂದಾಗಿದೆ.

ಈ ಸಂಬಂಧ ಸ್ಪೀಕರ್ ಜಾನ್ ಬೋನರ್‌ಗೆ ಪತ್ರ ಬರೆದಿರುವ ಕ್ಯಾಲಿಪೋರ್ನಿಯಾದ ರಿಪಬ್ಲಿಕನ್ ಪಕ್ಷದ ಸಂಸದ ಎಡ್ ರಾಯ್ಸ್ ಅವರು, ಸೆಪ್ಟೆಂಬರ್‌ನಲ್ಲಿ ಅಮೆರಿಕಕ್ಕೆ ಆಗಮಿಸಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಸಂಸತ್‌ನ್ನು ಉದ್ದೇಶಿಸಿ ಭಾಷಣ ಮಾಡಲು ಆಹ್ವಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಅಮೆರಿಕ ಸಂಸದರ ಈ ಪತ್ರಕ್ಕೆ ಸ್ಪೀಕರ್ ಜಾನ್ ಅವರು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಮೋದಿಗೆ ಆಹ್ವಾನ ನೀಡುವುದು ಖಚಿತ ಎಂದು ರಾಯ್ಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದು ರಾಜಕೀಯವೋ, ಆರ್ಥಿಕತೆಯೋ ಅಥವಾ ಉಭಯ ದೇಶಗಳ ನಡುವಿನ ಸಂಬಂಧ ಸುಧಾರಣೆಯೋ ಗೊತ್ತಿಲ್ಲ. ಆದರೆ ಅಮೆರಿಕಕ್ಕೆ ದಕ್ಷಿಣ ಏಷ್ಯಾದಲ್ಲಿ ಭಾರತಕ್ಕಿಂತ ಮಹತ್ವದ ದೇಶ ಮತ್ತೊಂದಿಲ್ಲ. 21ನೇ ಶತಮಾನದಲ್ಲಿ ಭಾರತ-ಅಮೆರಿಕ ನಡುವಿನ ಸಂಬಂಧಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ರಾಯ್ಸ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾದ ಕೆಲವೇ ತಿಂಗಳಲ್ಲಿ ಸಂಭವಿಸಿದ್ದ 2002ರ ಗುಜರಾತ್ ಗಲಭೆಯಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದರು. ಇದರ ಹಿಂದೆ ಮೋದಿ ಅವರ ಕೈವಾಡವಿದೆ ಎಂದು ಆರೋಪಿಸಲಾಗಿತ್ತು. ಆದರೆ ಆರೋಪ ಸುಳ್ಳು, ಗಲಭೆಗಳಲ್ಲಿ ಮೋದಿ ಪಾತ್ರ ಏನೂ ಇಲ್ಲ ಎಂದು 2010ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಅಮೆರಿಕ ಮೋದಿಗೆ ವೀಸಾ ನೀಡಲು ನಿರಾಕರಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement