ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಪ್ಪುಹಣ: ಭಾರತೀಯರ ವಿವರ ನೀಡಲು ಸ್ವಿಸ್ ಸಿದ್ಧ

ಪ್ರಮುಖ ಬೆಳವಣಿಗೆಯೊಂದರಲ್ಲಿ ತನ್ನ ಬ್ಯಾಂಕ್ಗಳಲ್ಲಿ ಕಪ್ಪುಹಣ ಹೊಂದಿರುವ ಭಾರತೀಯರ ವಿವರ ನೀಡಲು ಸ್ವಿಸ್ ಸರ್ಕಾರ ಒಪ್ಪಿಗೆ ಸೂಚಿಸಿದೆ.

Srinivasa Murthy VN
Updated On : 22 Jun 2014, 4:58 am

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ ತನ್ನ ಬ್ಯಾಂಕ್ಗಳಲ್ಲಿ ಕಪ್ಪುಹಣ ಹೊಂದಿರುವ ಭಾರತೀಯರ ವಿವರ ನೀಡಲು ಸ್ವಿಸ್ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಭಾರತ ಸರ್ಕಾರದ ನಿರಂತರ ಒತ್ತಡದ ನಂತರ ಇದೀಗ ಸ್ವಿಟ್ಜರ್ಲೆಂಡ್ ಸರ್ಕಾರ ತನ್ನ ದೇಶದ ಬ್ಯಾಂಕ್ಗಳಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರ ನೀಡಲು ಇಂದು ಒಪ್ಪಿಗೆ ನೀಡಿದೆ. ಈಗಾಗಲೇ ಕಪ್ಪುಹಣ ಹೊಂದಿರಬಹುದಾದ ಶಂಕಿತ ಭಾರತೀಯ ಖಾತೆದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿರುವ ಸ್ವಿಸ್ ಸರ್ಕಾರ, ಶೀಘ್ರದಲ್ಲಿಯೇ ಪಟ್ಟಿಯನ್ನು ಭಾರತ ಸರ್ಕಾರಕ್ಕೆ ನೀಡುವ ಸಾಧ್ಯತೆ ಇದೆ.

ಈ ಹಿಂದೆ ಕಪ್ಪುಹಣದ ವಾಪಸಾತಿಗಾಗಿ ಕಠಿಣ ಕ್ರಮ ಕೈಗೊಂಡಿದ್ದ ಕೇಂದ್ರದ ಎನ್ಡಿಎ ಸರ್ಕಾರ, ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚನೆ ಮಾಡಿತ್ತು. ಕಪ್ಪುಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ವಿಶೇಷ ತನಿಖಾ ತಂಡದ ಸತತ ಪ್ರಯತ್ನದಿಂದಾಗಿ ಇಂದು ಸ್ವಿಸ್ ಸರ್ಕಾರ ಕಪ್ಪುಹಣ ಹೊಂದಿರುವ ಭಾರತೀಯರ ವಿವರ ನೀಡಲು ಮುಂದಾಗಿದೆ.

ಸ್ವಿಸ್ ಬ್ಯಾಂಕ್ಗಳಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಪ್ಪುಹಣ ಇರಿಸಿರುವವರ ಪಟ್ಟಿಯಲ್ಲಿ ಭಾರತ 14ನೇ ಸ್ಥಾನದಲ್ಲಿದ್ದು, ಸ್ವಿಸ್ ಬ್ಯಾಂಕ್ನಲ್ಲಿ ಭಾರತೀಯರು ಹೊಂದಿರುವ ಕಪ್ಪುಹಣದ ಪ್ರಮಾಣ 14 ಸಾವಿರ ಕೋಟಿಗಳಿಗೇರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement