ಧೋನಿ ವಿರುದ್ಧ ಅರೆಸ್ಟ್ ವಾರೆಂಟ್
ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅನಂತಪುರ: ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಾಹೀರಾತಿನಲ್ಲಿ ಹಿಂದೂ ದೇವತೆಗಳಿಗೆ ಅವಮಾನ ಮಾಡಿದ ಆರೋಪ ಎದುರಿಸುತ್ತಿರುವ ಧೋನಿ ವಿರುದ್ಧ ಅನಂತಪುರ ಕೋರ್ಟ್ ಮಂಗಳವಾರ ಬಂಧನ ವಾರೆಂಟ್ ಜಾರಿ ಮಾಡಿದೆ.
ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಧೋನಿ ವಿರುದ್ಧ ಆಂಧ್ರಪ್ರದೇಶದ ಅನಂತಪುರ ಕೋರ್ಟ್ನಲ್ಲಿ ದೂರು ದಾಖಲಾಗಿತ್ತು. ಆದರೆ ಪ್ರಕರಣ ಸಂಬಂಧ ಕೋರ್ಟ್ ಮೂರು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಗೆ ಹಾಜರಾಗದ ಧೋನಿ ವಿರುದ್ಧ ಇಂದು ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಅಲ್ಲದೆ ಜುಲೈ 16ರೊಳಗೆ ಧೋನಿಯನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಧೋನಿ ವಿಷ್ಣು ಅವತಾರದಲ್ಲಿ 8 ಕೈಗಳಲ್ಲಿ ಶೂ ಹಿಡಿದು ಜಾಹೀರಾತು ನೀಡಿದ್ದರು. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ವಿಶ್ವ ಹಿಂದು ಪರಿಷತ್ ನಾಯಕ ವೈ ಶ್ಯಾಮಸುಂದರ್ ಅವರು ಕಳೆದ ಫೆಬ್ರುವರಿಯಲ್ಲಿ ದೂರು ದಾಖಲಿಸಿದ್ದರು.