ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹಳಿ ತಪ್ಪಿದ ರಾಜಧಾನಿ ಎಕ್ಸ್‌ಪ್ರೆಸ್: 4 ಸಾವು, ಸ್ಥಳದಲ್ಲಿ 3 ಟೈಂ ಬಾಂಬ್ ಪತ್ತೆ

ಛಾಪ್ರಾದ ಗೋಲ್ಡನ್ ಗಂಜ್ ಬಳಿ ದೆಹಲಿ - ದಿಬ್ರುಗಡ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಬುಧವಾರ ಬೆಳಗ್ಗೆ ಹಳಿ ತಪ್ಪಿದ್ದು,

Lingaraj Badiger
Updated On : 25 Jun 2014, 3:28 am

ಛಾಪ್ರಾ: ಛಾಪ್ರಾದ ಗೋಲ್ಡನ್ ಗಂಜ್ ಬಳಿ ದೆಹಲಿ ದಿಬ್ರುಗಡ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಬುಧವಾರ ಬೆಳಗ್ಗೆ ಹಳಿ ತಪ್ಪಿದ್ದು, ರೈಲಿನ 12 ಬೋಗಿಗಳು ನೆಲಕ್ಕುರುಳಿವೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಇಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪಾಟ್ನಾದಿಂದ 75 ಕಿ.ಮಿ ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉರುಳಿಬಿದ್ದ ಬೋಗಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ರೇಲ್ವೆ ವಕ್ತಾರ ಅನಿಲ್ ಸಕ್ಸೆನಾ ಅವರು ತಿಳಿಸಿದ್ದಾರೆ. ರೇಲ್ವೆ ಇಲಾಖೆ ಮೃತಪಟ್ಟವರಿಗೆ ತಲಾ 2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ರೇಲ್ವೆ ಸಚಿವ ಡಿ.ವಿ.ಸದಾನಂದಗೌಡ ಅವರು, ರೈಲು ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಮಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದಿದ್ದಾರೆ.

ರೈಲು ಅಪಘಾತ ನಡೆದ ಸ್ಥಳದಲ್ಲಿ ಮೂರು ಟೈಂ ಬಾಂಬ್ ಪತ್ತೆಯಾಗಿದ್ದು, ಘಟನೆಯ ಹಿಂದೆ ನಕ್ಸಲರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ರೇಲ್ವೆ ಸಚಿವರು, ನಕ್ಸಲರ ಕೈವಾಡ ಇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ ಮತ್ತು ಗಾಯಗೊಂಡವರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement