ಐಸಿಸಿ ಅಧ್ಯಕ್ಷರಾಗಿ ಎನ್.ಶ್ರೀನಿವಾಸನ್ ಅಧಿಕಾರ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಶ್ರೀನಿವಾಸನ್ ಅವರು ಗುರುವಾರ ಅಂತರಾಷ್ಟ್ರೀಯ ಕ್ರಿಕೆಟ್...
ಮೆಲ್ಬರ್ನ್: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಶ್ರೀನಿವಾಸನ್ ಅವರು ಗುರುವಾರ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇಂದು ಮೆಲ್ಬರ್ನ್ನಲ್ಲಿ ನಡೆದ ಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀನಿವಾಸನ್ ಅವರನ್ನು ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇದೇ ಸಭೆಯಲ್ಲಿಯೇ ಶ್ರೀನಿವಾಸನ್ ಅವರು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಐಸಿಸಿ ಅಧ್ಯಕ್ಷರ ಹುದ್ದೆಗೆ ಬಿಸಿಸಿಐ ಎನ್. ಶ್ರೀನಿವಾಸನ್ ಅವರ ಹೆಸರು ಶಿಫಾರಸು ಮಾಡಿತ್ತು.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಸಂಬಂಧ ಶ್ರಿನಿವಾಸನ್ ಅವರನ್ನು ಬಿಸಿಸಿಐ ಅಧ್ಯಕ್ಷ ಹುದ್ದೆಯಿಂದ ಸುಪ್ರೀಂ ಕೋರ್ಟ್ ಪದಚ್ಯುತಗೊಳಿಸಿತ್ತು. ಶ್ರೀನಿವಾಸನ್ ಅವರ ಅಧಿಕಾರವಧಿ ಈ ವರ್ಷ ಸೆಪ್ಟೆಂಬರ್ನಲ್ಲಿ ಅಂತ್ಯಗೊಳ್ಳುತ್ತಿತ್ತು.
ಶ್ರೀನಿವಾಸನ್ ಸೇರಿದಂತೆ 12 ಮಂದಿ ಕ್ರಿಕೆಟಿಗರ ವಿರುದ್ಧದ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತನಿಖೆಗೆ ನ್ಯಾಯಮೂರ್ತಿ ಮುದ್ಗಲ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿ ಆಗಸ್ಟ್ ಅಂತ್ಯಕ್ಕೆ ತನ್ನ ತನಿಖಾ ವರದಿ ನೀಡಲಿದೆ.