ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆಂಧ್ರದಲ್ಲಿ ಭೀಕರ ಅಗ್ನಿ ದುರಂತ: 15 ಮಂದಿ ಸಜೀವ ದಹನ

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಶುಕ್ರವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 15 ಮಂದಿ...

Lingaraj Badiger
Updated On : 27 Jun 2014, 3:33 am

ಹೈದರಾಬಾದ್: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಶುಕ್ರವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 15 ಮಂದಿ ಸಜೀವ ದಹನವಾಗಿದ್ದು, 7ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪೂರ್ವ ಗೋದಾವರಿ ಜಿಲ್ಲೆಯ ನಗರಂನಲ್ಲಿರುವ ಜಿಎಐಎಲ್ ಕಂಪನಿಗೆ ಸೇರಿದ ಒಎನ್‌ಜಿಸಿ ಗ್ಯಾಸ್ ಪೈಪ್‌ಲೈನ್ ಸ್ಫೋಟಗೊಂಡು ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಆಂಧ್ರಪ್ರದೇಶದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.

ನಮಗೆ ಬಂದಿರುವ ಮಾಹಿತಿ ಪ್ರಕಾರ, ಅಗ್ನಿ ದುರಂತದಲ್ಲಿ 15 ಮಂದಿ ಮೃತಪಟ್ಟಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಂಧ್ರಪ್ರದೇಶ ಹಣಕಾಸು ಸಚಿವ ಯನಮಲ ರಾಮಕೃಷ್ಣ ನಾಯ್ಡು ಅವರು ತಿಳಿಸಿದ್ದಾರೆ.

ಅಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಈವರೆಗೆ 13 ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಮತ್ತು ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಅವರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಭೇಟಿ ನೀಡಿದ್ದು, ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಪ್ರಧಾನಿ ಸಂತಾಪ
ಘಟನೆಯ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಈ ಸಂಬಂಧ ತಾವು ಇಂಧನ ಸಚಿವ ಧರ್ಮೇಂದರ್ ಪ್ರಧಾನ್ ಹಾಗೂ ಜಿಎಐಎಲ್ ಕಂಪನಿ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಪರಿಹಾರದ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement