ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಲ್ಕು ವರ್ಷದ ಪದವಿ ಕೋರ್ಸ್ ಹಿಂಪಡೆದ ದೆಹಲಿ ವಿವಿ

ದೆಹಲಿ ವಿಶ್ವವಿದ್ಯಾಲಯ ಮತ್ತು ವಿಶ್ವವಿದ್ಯಾಲಯಗಳ ಅನುದಾನ...

Lingaraj Badiger
Updated On : 27 Jun 2014, 1:14 am

ನವದೆಹಲಿ: ದೆಹಲಿ ವಿಶ್ವವಿದ್ಯಾಲಯ ಮತ್ತು ವಿಶ್ವವಿದ್ಯಾಲಯಗಳ ಅನುದಾನ ಆಯೋಗ(ಯುಜಿಸಿ)ದ ನಡುವೆ ಉಂಟಾಗಿದ್ದ ಬಿಕ್ಕಟ್ಟು ಶುಕ್ರವಾರ ಶಮನಗೊಂಡಿದ್ದು, ವಿದ್ಯಾರ್ಥಿಗಳಲ್ಲಿ ಮನೆಮಾಡಿದ್ದ ಆತಂಕ ದೂರವಾಗಿದೆ.

ದೆಹಲಿ ವಿಶ್ವವಿದ್ಯಾಲಯ ಉದ್ದೇಶಿತ ನಾಲ್ಕು ವರ್ಷದ ಪದವಿ ಕೋರ್ಸ್‌ನ್ನು ಹಿಂಪಡೆದಿದ್ದು, ಮೂರು ವರ್ಷಗಳ ಪದವಿ ಕೋರ್ಸ್ ಮುಂದುವರಿಕೆಗೆ ನಿರ್ಧರಿಸಲಾಗಿದೆ. ಈ ಸಂಬಂಧ ದೆಹಲಿ ವಿವಿ ಮತ್ತು ಯುಜಿಸಿ ಮಧ್ಯ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಸೋಮವಾರದಿಂದ ಪದವಿ ಪ್ರವೇಶಾತಿ ಆರಂಭಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ.

ನಾಲ್ಕು ವರ್ಷಗಳ ಪದವಿ ಕೋರ್ಸ್ ಹಿಂಪಡೆದು, ಹಿಂದಿನಂತೆ ಮೂರು ವರ್ಷಗಳ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಿಸುವಂತೆ ಯುಜಿಸಿ ದೆಹಲಿ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೆ ಈ ಬಗ್ಗೆ ಪ್ರತಿಕ್ರಿಯಿಸುವಂತೆ ನಿನ್ನೆ 24 ಗಂಟೆಗಳ ಗಡುವು ಕೂಡ ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement