ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉತ್ತರ ದೆಹಲಿಯಲ್ಲಿ ಕುಸಿದುಬಿದ್ದ 3 ಅಂತಸ್ತಿನ ಕಟ್ಟಡ: 7 ಸಾವು

ಉತ್ತರ ದೆಹಲಿಯ ಇಂದ್ರಲೋಕ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು,...

Lingaraj Badiger
Updated On : 28 Jun 2014, 3:02 am

ನವದೆಹಲಿ: ಉತ್ತರ ದೆಹಲಿಯ ಇಂದ್ರಲೋಕ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಘಟನೆಯಲ್ಲಿ 7ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ ಇನ್ನೂ 20 ಹೆಚ್ಚು ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇಂದು ಬೆಳಗ್ಗೆ 9ಗಂಟೆಯ ಸುಮಾರಿಗೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಈವರೆಗೆ 11 ಮಂದಿಯಲ್ಲಿ ರಕ್ಷಿಸಲಾಗಿದೆ ಮತ್ತು ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕುಟುಂಬಗಳು ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಈ ಕಟ್ಟಡವು ಅನಧಿಕೃತವಾಗಿದ್ದು, ಪ್ರಾಥಮಿಕ ತನಿಖೆಯಿಂದ ಈ ಮಾಹಿತಿ ಹೊರಬಿದ್ದಿದೆ. ಅಲ್ಲದೆ ಪದೇಪದೆ ದುರಸ್ತಿ ಕಾರ್ಯಗಳು ನಡೆಯುತ್ತಿದ್ದವು ಎನ್ನಲಾಗಿದೆ.

ಹೀಗಾಗಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಮಹಾನಗರ ಪಾಲಿಕೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಪ್ರಸ್ತುತ ಕಟ್ಟಡ ಕುಸಿತ ದುರಂತ ಪ್ರಕರಣವನ್ನು ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುಮಾರು 50 ವರ್ಷಗಳಿಗೂ ಮೀರಿದ ಹಳೆಯ ಕಟ್ಟಡದಲ್ಲಿ ಅಗತ್ಯಕ್ಕಿಂತಲೂ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement