ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜ್ಯಪಾಲರಾಗಿ ರೋಸಯ್ಯ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ಹಂಗಾಮಿ ರಾಜ್ಯಪಾಲರಾಗಿ ತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಅವರು..

Srinivasa Murthy VN
Updated On : 29 Jun 2014, 4:48 am

ಬೆಂಗಳೂರು: ಕರ್ನಾಟಕದ ಹಂಗಾಮಿ ರಾಜ್ಯಪಾಲರಾಗಿ ತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಹಾಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಅಧಿಕಾರಾವಧಿ ಶನಿವಾರ ಪೂರ್ಣಗೊಂಡಿದ್ದು, ಕೇಂದ್ರ ಸರ್ಕಾರ ನೂತನ ರಾಜ್ಯಪಾಲರನ್ನು ನೇಮಕ ಮಾಡುವವರೆಗೂ ಕೆ.ರೋಸಯ್ಯ ಅವರು ಕರ್ನಾಟಕದ ರಾಜ್ಯಪಾಲ ಹುದ್ದೆಯನ್ನು ಹೆಚ್ಚುವರಿ ಜವಾಬ್ದಾರಿಯಾಗಿ ನಿರ್ವಹಿಸಲಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ರಾಜಭವನಕ್ಕೆ ಆಗಮಿಸಿದ ರೋಸಯ್ಯ ಅವರು, ಹಂಗಾಮಿ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಹೆಚ್.ವಘೇಲ ಅವರು ರೋಸಯ್ಯ ಅವರಿಗೆ ಪ್ರತಿಜ್ಞಾವಿಧಿ ಭೋಧಿಸಿದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಮ್ಮ, ವಿಧಾನಪರಿಷತ್ ಸಭಾಪತಿ ಡಿಎಚ್ ಶಂಕರಮೂರ್ತಿ, ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಟಿಪಿ ಜಯಚಂದ್ರ ಮತ್ತು ಸರ್ಕಾರದ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ಉಪಸ್ಥಿತರಿದ್ದರು. ಕೌಶಿಕ್ ಮುಖರ್ಜಿ ಅವರು ರಾಜ್ಯಪಾಲರ ನೇಮಕಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆದೇಶದ ಪ್ರತಿ ಓದಿದರು. ಅಲ್ಲದೆ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

ಪ್ರತಿಪಕ್ಷದ ಯಾವೊಬ್ಬ ನಾಯಕರೂ ಕಾರ್ಯಕ್ರಮದಲ್ಲಿ ಹಾಜರಿರಲಿಲ್ಲ. ತಮಿಳುನಾಡು ಮತ್ತು ಕರ್ನಾಟಕದ ನಡುವೆ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇರುವ ಭಿಕಟ್ಟನ್ನು ಉಭಯ ರಾಜ್ಯಗಳ ರಾಜ್ಯಪಾಲರಾಗಿರುವ ರೋಸಯ್ಯ ಅವರು ಸಮರ್ಥವಾಗಿ ನಿಭಾಯಿಸಬಲ್ಲರೇ ಎಂಬ ವಾದಗಳು ಇದೀಗ ಚರ್ಚೆಯಾಗ ತೊಡಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement