ಪೆಟ್ರೋಲ್ ಪ್ರತಿ ಲೀ.ಗೆ 1.69, ಡೀಸೆಲ್ 50 ಪೈಸೆ ಹೆಚ್ಚಳ
ರೈಲ್ವೇ ಪ್ರಯಾಣ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಶಾಕ್ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ಸವಾರರ...
ನವದೆಹಲಿ: ರೈಲ್ವೇ ಪ್ರಯಾಣ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಶಾಕ್ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ಸವಾರರ ಜೇಬಿಗೆ ಕತ್ತರಿ ಹಾಕಿದೆ.
ಪೆಟ್ರೋಲ್ ಪ್ರತಿ ಲೀಟರ್ಗೆ 1.69 ಪೈಸೆ ಹಾಗೂ ಡೀಸೆಲ್ 50 ಪೈಸೆ ಹೆಚ್ಚಳ ಮಾಡಿದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಇರಾಕ್ನಲ್ಲಿ ಐಎಸ್ಐಎಸ್ ಉಗ್ರರ ದಾಳಿಯಿಂದಾಗಿ ಕಚ್ಚಾ ತೈಲ ಆಮದಿನಲ್ಲಿ ಏರುಪೇರು ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ.
ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹಣದುಬ್ಬರ ಮತ್ತು ಬೆಲೆ ಏರಿಕೆಯನ್ನು ಕಡಿಮೆ ಮಾಡುವ ಭರವಸೆ ನೀಡಿದ್ದ ಪ್ರಧಾನಿ ಮೋದಿ ಅವರು, ಇದೀಗ ಒಂದೊಂದೆ ಪದಾರ್ಥಗಳ ಬೆಲೆ ಏರಿಕೆ ಮಾಡಿ ಜನರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಾರೆ.