ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಯುಪಿ: ಹದಗೆಟ್ಟ ಕಾನೂನು ಸುವ್ಯವಸ್ಥೆ; ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿ ಲಖನೌನಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದಾರೆ.

Srinivasa Murthy VN
Updated On : 30 Jun 2014, 2:10 am

ಲಖನೌ: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿ ಲಖನೌನಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಲಖನೌನಲ್ಲಿರುವ ಉತ್ತರ ಪ್ರದೇಶ ವಿಧಾನಸೌಧದ ಬಳಿ ನೆರೆದಿರುವ ನೂರಾರು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ ಬ್ಯಾರಿಕೇಡ್‌ಗಳನ್ನು ಮುರಿದು ವಿಧಾನಸೌಧದ ಒಳಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಲಘು ಲಾಠಿ ಪ್ರಹಾರವನ್ನು ಕೂಡ ನಡೆಸಿದ್ದಾರೆ.

ಬಿಜೆಪಿ ಯುವಮೋರ್ಚಾ ಘಟಕ ನಡೆಸುತ್ತಿರುವ ಪ್ರತಿಭಟನೆ ಇದೀಗ ಹಿಂಸಾರೂಪಕ್ಕೆ ತಿರುಗಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ. ಬದನೌ ಗ್ರಾಮದಲ್ಲಿನ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಮತ್ತು ಕಳೆದ ಒಂದು ತಿಂಗಳಿನಿಂದ ಉತ್ತರ ಪ್ರದೇಶದಲ್ಲಿ ನಡೆದ ಅಪರಾಧ ಕೃತ್ಯಗಳ ಪ್ರಮಾಣದ ಏರಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement