ತೆಹಲ್ಕಾ ತೇಜ್ಪಾಲ್ಗೆ ಜಾಮೀನು
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ...
ನವದೆಹಲಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ಪಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ತೇಜ್ಪಾಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, 'ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದಿಲ್ಲ' ಎಂಬ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ಕೋರ್ಟ್ಹೆ ಪಾಸ್ಪೋರ್ಟ್ ಸಲ್ಲಿಸುವಂತೆ ಮತ್ತು ವಿಚಾರಣೆ ದಿನ ತಪ್ಪದೆ ಕೋರ್ಟ್ಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಪ್ರಕರಣ ಸಂಬಂಧ ನವೆಂಬರ್ 30, 2013ರಂದು ಗೋವಾ ಪೊಲೀಸರು ತೇಜ್ಪಾಲ್ ಅವರನ್ನು ಬಂಧಿಸಿದ್ದರು. ಇತ್ತೀಚಿಗಷ್ಟೇ ಅವರು ಮೂರು ವಾರಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿದ್ದರು.
ಮೇ 19ರಂದು ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವ ನಿಟ್ಟಿನಲ್ಲಿ ತರುಣ್ ತೇಜ್ಪಾಲ್ ಅವರಿಗೆ ಸುಪ್ರೀಂ ಕೋರ್ಟ್ ಮೂರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.