ಬೆಳಗಾವಿಯಲ್ಲಿ ಗುಂಪು ಘರ್ಷಣೆ: ಓರ್ವ ಸಾವು
ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮಾನಮ್ಮಿ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಸಂಬಂಧ ಎರಡು ಗುಂಪುಗಳ ಮಧ್ಯ ಘರ್ಷಣೆ ಸಂಭವಿಸಿದ್ದು,
ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮಾನಮ್ಮಿ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಸಂಬಂಧ ಎರಡು ಗುಂಪುಗಳ ಮಧ್ಯ ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 7ಕ್ಕು ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಟ್ರಾನ್ಸ್ಫಾರ್ಮರ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ, ಪರಸ್ಪರ ಕಲ್ಲು ತೂರಿದ್ದಾರೆ. ಘಟನೆಯಲ್ಲಿ ದುಂಡಪ್ಪ(35) ಎಂಬ ವ್ಯಕ್ತಿ ಕಲ್ಲೇಟಿನಿಂದ ಸ್ಥಳದಲ್ಲೇ ಮೃತುಪಟ್ಟಿದ್ದಾನೆ. ಇನ್ನು ಹಲವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಕಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.