ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೇವು ಹಗರಣ: ಸಿಬಿಐನಿಂದ ಲಾಲೂ ಅರ್ಜಿ ವಜಾ

ಮೇವು ಹಗರಣಕ್ಕೆ ಸಂಬಂಧಿಸಿದಂತೆ ಇತರ ಮೂರು ಪ್ರಕರಣಗಳ ವಿಚಾರಣೆಯನ್ನು...

Vishwanath S
Updated On : 1 Jul 2014, 3:56 am

ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಇತರ ಮೂರು ಪ್ರಕರಣಗಳ ವಿಚಾರಣೆಯನ್ನು ರದ್ದು ಪಡಿಸುವಂತೆ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ಸಿಬಿಐ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಮೇವು ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಇತರ ಮೂರು ಪ್ರಕರಣಗಳ ವಿಚಾರಣೆಯನ್ನು ರದ್ದು ಪಡಿಸುವಂತೆ ಸಿಬಿಐ ಕೋರ್ಟ್‌ಗೆ ಮನವಿ ಮಾಡಿದ್ದರು.

ಇಂದು ವಿಚಾರಣೆ ನಡೆಸಿದ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದು, ಮೇವು ಹಗರಣ ಹಾಗೂ ಇತರೆ ಮೂರು ಪ್ರಕರಣಗಳು ವಿಭಿನ್ನವಾಗಿದೆ ಎಂದು ಹೇಳಿದೆ.

ಬಹುಕೋಟಿ ಮೇವು ಖರೀದಿ ಹಗರಣ ಸಂಬಂಧ ಜೈಲು ಪಾಲಾಗಿದ್ದ ಲಾಲು ಪ್ರಸಾದ್ ಯಾದವ್ ಅವರಿಗೆ ಸುಪ್ರೀಂಕೋರ್ಟ್ ಡಿಸೆಂಬರ್ 13ರಂದು ಜಾಮೀನು ಮಂಜೂರು ಮಾಡಿತ್ತು.

ಮೇವು ಹಗರಣ ಸಂಬಂಧ ರಾಂಚಿ ಸಿಬಿಐ ಕೋರ್ಟ್ ಲಾಲುಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement