ಸುಬ್ರಹ್ಮಣ್ಯಂ ಹೆಸರು ತಿರಸ್ಕರಿಸಿದ ಕೇಂದ್ರದ ವಿರುದ್ಧ ಸಿಜೆ ಲೋಧಾ ಗರಂ
ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಆರ್.ಎಂ. ಲೋಧಾ ಅವರು ಗರಂ ಆಗಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಮಾಜಿ ಸಾಲಿಸಿಟರ್ ಜನರಲ್ ಗೋಪಾಲ ಸುಬ್ರಹ್ಮಣ್ಯಂ ಹೆಸರನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಸಿಜೆ ಲೋಧಾ ಅವರು ಅಸಮಾಧಾನ ಹೊರ ಹಾಕಿದ್ದಾರೆ.
ನನ್ನ ಅರಿವಿಗೆ ತರದೇ ಹಾಗೂ ನನ್ನನ್ನು ಸಂಪರ್ಕಿಸದೇ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಕ್ರಮದಿಂದ ನನಗೆ ಬೇಸರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.